Monday, December 23, 2024

ರೇಷನ್ ಕಾರ್ಡ್ ತಿದ್ದುಪಡಿಗೆ ಮಾನದಂಡ ಏನು?

ಬೆಂಗಳೂರು : ಕಳೆದ ಮೂರ್ನಾಲ್ಕು ತಿಂಗಳಿನಿಂದ ಕಾದು ಕುಳಿತಿದ್ದ ಎಪಿಎಲ್​(APL) ಮತ್ತು ಬಿಪಿಎಲ್(BPL) ಕಾರ್ಡ್ ಬಳಕೆದಾರರಿಗೆ ಆಹಾರ ಇಲಾಖೆ ಸಿಹಿಸುದ್ದಿ ನೀಡಿದೆ.

ಇಂದಿನಿಂದ ಎಪಿಎಲ್(APL) ರೇಷನ್ ಕಾರ್ಡ್ ತಿದ್ದುಪಡಿಗೆ ಸರ್ಕಾರದಿಂದ ವೆಬ್​ಸೈಟ್ ತೆರೆಯಲಾಗಿದೆ ಎಂದು ಆಹಾರ ವ್ಯವಸ್ಥಾಪಕ ನಿರ್ದೇಶಕರಾದ ಗ್ಯಾನೇಂದ್ರ ಅವರು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಬಿಪಿಎಲ್(BPL) ಕಾರ್ಡ್ ತಿದ್ದುಪಡಿಗೆ ಮತ್ತು ಸೇರ್ಪಡೆಗೆ ಬೇಡಿಕೆ ಹೆಚ್ಚಾಗಿತ್ತು. ಈ ಹಿನ್ನೆಲೆ ಇಂದಿನಿಂದಲೇ ಹೊಸ ಹೆಸರುಗಳ ಸೇರ್ಪಡೆಗೆ ಮತ್ತು ಪಡಿತರ ತಿದ್ದುಪಡಿಗೆ ವೆಬ್​​ಸೈಟ್​ತೆರೆಯಲಾಗಿದೆ ಎಂದು ಹೇಳಿದ್ದಾರೆ.

ಪಡಿತರಕ್ಕೆ ಹೊಸದಾಗಿ ಹೆಸರನ್ನ ಸೇರಿಸಲು, ತೆಗೆದು ಹಾಕಲು ಅಥವಾ ತಿದ್ದುಪಡಿ ಮಾಡಲು ಇಂದಿನಿಂದ ಸರ್ಕಾರ ಅನುಮತಿ ಕೊಟ್ಟಿದೆ. ರೇಷನ್ ಕಾರ್ಡ್​ನಲ್ಲಿ ಹೆಸರುಗಳ ತಿದ್ದುಪಡಿ ಸೇರಿದಂತೆ ವಿಳಾಸದ ಅಡ್ರೆಸ್ ಕೂಡ ತಿದ್ದುಪಡಿ ಮಾಡಬಹುದಾಗಿದೆ ಎಂದು ತಿಳಿಸಿದ್ದಾರೆ.

ಮಾನದಂಡ ಏನು?

  • ವಾರ್ಷಿಕ ಆದಾಯ 1.2 ಲಕ್ಷ ಮೀರಿರಬಾರದು
  • 3 ಹೆಕ್ಟರ್‌ಗಿಂತ ಹೆಚ್ಚಿನ ಒಣಭೂಮಿ ಹೊಂದಿರಬಾರದು
  • ವೈಟ್ ಬೋರ್ಡ್ 4 ಚಕ್ರದ ವಾಹನ ಇರಬಾರದು
  • ಯಾವುದೇ ಸರ್ಕಾರಿ ನೌಕರರಾಗಿರಬಾರದು
  • ನಗರದ ಭಾಗದಲ್ಲಿ ಮನೆಯ ವಿಸ್ತೀರ್ಣ 1000 sqt ಮೀರಬಾರದು
  • ವಾಣಿಜ್ಯ ತೆರಿಗೆ, ಆದಾಯ ತೆರಿಗೆ, IT ರಿಟರ್ನ್ಸ್ ಪಾವತಿದಾರರು

RELATED ARTICLES

Related Articles

TRENDING ARTICLES