Sunday, November 3, 2024

ರೈತರು ಸುಪ್ರೀಂ ಕೋರ್ಟ್ ಗೆ ಹೋಗುವುದಾದರೆ ನೀವೇಕೆ ಅಧಿಕಾರದಲ್ಲಿದ್ದೀರಿ : ಡಿಕೆಶಿಗೆ ಬೊಮ್ಮಾಯಿ ಪ್ರಶ್ನೆ

ಬೆಂಗಳೂರು: ಕಾವೇರಿ ‌ನೀರು ಉಳಿಸಿಕೊಳ್ಳಲು ರೈತರು ಸುಪ್ರೀಂ ಕೊರ್ಟ್ ಗೆ ಹೋಗುವುದಾದರೆ ನೀವೇಕೆ ಅಧಿಕಾರದಲ್ಲಿದ್ದೀರಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು  ಪ್ರಶ್ನಿಸಿದ್ದಾರೆ.

ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಿನ್ನೆ ಡಿಸಿಎಂ  ಡಿಕೆ‌ ಶಿವಕುಮಾರ್ ಅವರು  ಬೀಗದ ಕೈ ನಮ್ಮ ಕಡೆ ಇಲ್ಲ ಅಂತ ಹೇಳಿದ್ದಾರೆ. ನಮ್ಮ ರಾಜ್ಯದ ಹಕ್ಕಿದೆ,  ಡ್ಯಾಮ್ ನಮ್ಮಲಿದೆ ನಮ್ಮ ಹಕ್ಕನ ಇವರು ಬಿಟ್ಟು ಕೊಡುತ್ತಿದ್ದಾರೆ. ಇದರ ಬಗ್ಗೆ ಅವರಿಗೆ ಮಾಹಿತಿ ಇದೆಯೋ ಇಲ್ಲವೋ ಗೊತ್ತಿಲ್ಲ ನಮ್ಮ ಹಕ್ಕನ್ನು ಅವರಿಗೆ ಬಿಟ್ಟು ಕೊಟ್ಟು, ತಾವು ಮಾಡಿದ ತಪ್ಪಿಗೆ. ರೈತರಿಗೆ ಸುಪ್ರೀಂ ಕೋರ್ಟಿಗೆ ಹೋಗಿ ಅಂತ ಹೇಳುತ್ತಿದ್ದಾರೆ.

ಇದನ್ನೂ ಓದಿ: ಮೈಸೂರು ಪಾಲಿಕೆ ಚುನಾವಣೆ: “ಕೈ” ವಶವಾಗುವಂತೆ ಕೆಲಸ ಮಾಡಿ- ಸಿಎಂ

ರೈತರು ಸುಪ್ರೀಂಕೋರ್ಟಿಗೆ ಹೋಗಬೇಕಾದರೆ ನಿಮ್ಮನ್ನು ಯಾಕೆ ಆಯ್ಕೆ ಮಾಡಬೇಕಿತ್ತು ಇವರು ಯಾಕೆ ಸರಕಾರದಲ್ಲಿ ಅಧಿಕಾರ ಮಾಡಬೇಕು. ನೀವು ರಕ್ಷಣೆ ಮಾಡಲಿ ಅಂತಾನೆ ಜನ ನಿಮ್ಮನ್ನ ಆಯ್ಕೆ ಮಾಡಿದ್ದಾರೆ. ಕಾವೇರಿ ಜಲಾನಯನ ಪ್ರದೇಶದ ಜನ ಶಾಸಕರನ್ನು ಕೊಟ್ಟಿದ್ದಾರೆ. ಅವರು ರೈತರನ ರಕ್ಷಣೆ ಮಾಡದೇ ಇದ್ದರೆ ನೀವುಗಳು ಯಾಕೆ ಬೇಕು ?  ಇದರಲ್ಲಿ ಏನೋ ರಾಜಕೀಯ ಹಿತಾಸಕ್ತಿ ಇದೆ ಅಂತ ಕಾಣಿಸುತ್ತಿದೆ. ನಾನು ವಿರೋಧ ಪಕ್ಷದ ಸದಸ್ಯನಾಗಿ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆಯನ್ನು ಕೊಡುತ್ತಿದ್ದೇನೆ. ಅದನ್ನೇ ಹಿತಾಸಕ್ತಿಯನ್ನು ಕಾಪಾಡುವ ರಾಜಕಾರಣ ಅಂದರೆ ನಾವು ರೈತರ ರಕ್ಷಣೆಯನ್ನು  ಮಾಡುತ್ತೇವೆ. ರೈತರ ರಕ್ಷಣೆ ಮಾಡದೆ ಇವರು ನಿಜವಾದ ರಾಜಕಾರಣವನ್ನು ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

RELATED ARTICLES

Related Articles

TRENDING ARTICLES