Sunday, December 22, 2024

ಆಟೋ ಚಾಲಕನ ಉಸಿರು ನಿಲ್ಲಿಸಿದ ಕಿಲ್ಲರ್ KSRTC

ಹಾಸನ : ಆಟೋ ಹಾಗೂ KSRTC ಬಸ್ ನಡುವೆ ಭೀಕರ ಅಪಘಾತವಾಗಿದ್ದು, ಈ ವೇಳೆ ಆಟೋ ಚಾಲಕ ಸಾವನ್ನಪ್ಪಿರುವ ಘಟನೆ ಹಾಸನದ KIADB ಏರಿಯಾದ ಹಾಸನ-ಮೈಸೂರು ರಸ್ತೆಯಲ್ಲಿ ನಡೆದಿದೆ.

ಆಟೋದಲ್ಲಿದ್ದ ಇಬ್ಬರು ಪ್ರಯಾಣಿಕರಿಗೆ ಗಾಯಗಳಾಗಿವೆ. ಇನ್ನು ಬಸ್‌ ಡಿಕ್ಕಿ ಹೊಡೆದ ರಭಸಕ್ಕೆ ಆಟೋ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. ಬಸ್ ಚಾಲಕನ ಅಜಾಗರೂಕತೆಯಿಂದ ಈ ಅಪಘಾತ ಸಂಭವಿಸಿದೆ. ಆಟೋಗೆ ಬಸ್ ಡಿಕ್ಕಿ ಹೊಡೆಯೋ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ರುಂಡವಿಲ್ಲದ ಮೃತದೇಹ ಪತ್ತೆ

ರುಂಡವಿಲ್ಲದ ಮೃತದೇಹ ಪತ್ತೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಬಸ್ತವಾಡ ಗ್ರಾಮದ ಅರಣ್ಯಪ್ರದೇಶದಲ್ಲಿ ನಡೆದಿದೆ. ಅಕ್ಬರ್ ಶಬ್ಬೀರ ಜಮಾದಾರ ಕೊಲೆಯಾಗಿರೋ ದುರ್ದೈವಿಯಾಗಿದ್ದಾನೆ.

ಕೊಲೆಯಾದ ಅಕ್ಬರ್ ರಾಯಬಾಗ ತಾಲೂಕಿನ ಬಡಬ್ಯಾಕೂಡ ಗ್ರಾಮದ ವ್ಯಕ್ತಿಯಾಗಿದ್ದು, ಮೃತ ದೇಹ ಕಂಡು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ಸಂಬಂಧ ಸ್ಥಳಕ್ಕೆ ಹಾರೂಗೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾರೂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

Related Articles

TRENDING ARTICLES