Monday, December 23, 2024

ಸೌಜನ್ಯ ಪ್ರಕರಣ ಆರೋಪಿಗಳಿಗೆ ಗಲ್ಲು ಶಿಕ್ಷೆಗೆ ಆಗ್ರಹಿಸಿ ಪ್ರತಿಭಟನೆ!

ಧಾರವಾಡ : ಸೌಜನ್ಯ ಪ್ರಕರಣದ ಆರೋಪಿಗಳಿಗೆ ಗಲ್ಲು ಶಿಕ್ಷೆಗೆ ಅಗ್ರಹಿಸಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿಗಳು ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.

ಸೌಜನ್ಯ ಎಂಬ ಹೆಣ್ಣು ಮಗಳನ್ನು ಧರ್ಮಸ್ಥಳದಿಂದ  ಅಪಹರಿಸಿ‌ ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ. ಈ  ಪ್ರಕರಣ ನಡೆದು 11 ವರ್ಷ ಕಳೆಯುತ್ತಾ ಬಂದಿದೆ. ಆದರೂ , ಆರೋಪಿಗಳಿಗೆ ಇನ್ನೂ ಶಿಕ್ಷೆಯಾಗಿಲ್ಲ ಎಂದು ಆರೋಪಿಗಳ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು.

ಇದನ್ನೂ ಓದಿ: 1.32 ಕೋಟಿ ಮೌಲ್ಯದ ಪಡಿತರ ಅಕ್ಕಿ ನಾಪತ್ತೆ!:ಅಕ್ರಮ ಮಾರಾಟ ಶಂಕೆ

ಹೈಕೋರ್ಟ್ ನ್ಯಾಧೀಶರ ನೇತೃತ್ವದಲ್ಲಿ ತನಿಖಾ ತಂಡ ರಚಿಸಿ ಮರು ತನಿಖೆ ಮಾಡಬೇಕು, ಈ ಕುರಿತು ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು, ಇಲ್ಲವಾದಲ್ಲಿ ಉಗ್ರ ಹೋರಾಟದ ಎಚ್ಚರಿಕೆಯನ್ನು ಕ್ರಾಂತಿ ವೀರ ಸಂಗೊಳ್ಳಿರಾಯಣ್ಣ ಅಭಿಮಾನಿಗಳು ನೀಡಿದರು.

RELATED ARTICLES

Related Articles

TRENDING ARTICLES