Friday, November 22, 2024

ಜಿ.ಟಿ.ದೇವೆಗೌಡರ ಅಧ್ಯಕ್ಷತೆಯಲ್ಲಿ ಜೆಡಿಎಸ್ ನೂತನ ಕೋರ್ ಕಮಿಟಿ ರಚನೆ

ಬೆಂಗಳೂರು: ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೆಗೌಡ ರ ನಿರ್ದೇಶನದ ಮೇರೆಗೆ ಜೆಡಿಎಸ್ ಪಕ್ಷದ ಕೋರ್ ಕಮಿಟಿ ರಚನೆ ಮಾಡಲಾಗಿದೆ. ಮುಂದಿನ ಚುನಾವಣೆಗಳನ್ನು ಸಮರ್ಥವಾಗಿ ಎದುರಿಸುವುದು, ಪಕ್ಷವನ್ನು ಸದೃಢಗೊಳಿಸುವ ನಿಟ್ಟಿನಲ್ಲಿ ಮಾಜಿ ಸಚಿವ ಹಾಗೂ ಹಿರಿಯ ಶಾಸಕ ಜಿ.ಟಿ.ದೇವೇಗೌಡರ ಅಧ್ಯಕ್ಷತೆಯಲ್ಲಿ  ಜೆಡಿಎಸ್ ಪಕ್ಷದ ನೂತನ ಕಮಿಟಿ ರಚನೆ ಮಾಡಲಾಗಿದೆ.

ಪಕ್ಷದ ಕಚೇರಿ ಜೆಪಿ ಭವನದಲ್ಲಿ ಶುಕ್ರವಾರ ನಡೆದ ನಾಯಕರ ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ  ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ, ಕೋರ್ ಕಮಿಟಿ ಅಧ್ಯಕ್ಷರಾಗಿ ಮಾಜಿ ಸಚಿವ ಜಿ.ಟಿ.ದೇವೇಗೌಡ ಹಾಗೂ ಸಂಚಾಲಕರಾಗಿ ಮಾಜಿ ಶಾಸಕ ವೈ.ಎಸ್.ವಿ.ದತ್ತ ಅವರನ್ನು ನೇಮಕ ಮಾಡಲಾಗಿದೆ ಎಂದರು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಅಮೇರಿಕಾ ಎಂಬಸ್ಸಿ ಕಚೇರಿ ಪ್ರಾರಂಭ ಸ್ವಾಗತಾರ್ಹ: ಸಿಎಂ

ಆಗಸ್ಟ್ 7 ರಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ನೇತೃತ್ವದಲ್ಲಿ ನಡೆದ ಪಕ್ಷದ ಮುಖಂಡರು ಸಭೆಯಲ್ಲಿ ಕೋರ್ ಕಮಿಟಿಯ ಹೊಸ ಅಧ್ಯಕ್ಷರು ಹಾಗೂ ಸದಸ್ಯರ ಆಯ್ಕೆಯನ್ನು ಅಂತಿಮಗೊಳಿಸಲಾಯಿತು ಎಂದು ಅವರು ಹೇಳಿದರು.

ಕೋರ್ ಕಮಿಟಿಯಲ್ಲಿ ಮಾಜಿ ಸಚಿವರಾದ ಸಾ.ರಾ. ಮಹೇಶ್, ಬಂಡೆಪ್ಪ ಕಾಶೆಂಪುರ್, ಹೆಚ್.ಕೆ.ಕುಮಾರಸ್ವಾಮಿ, ವೆಂಕಟರಾವ್ ನಾಡಗೌಡ,  ಸಿ.ಎಸ್.ಪುಟ್ಟರಾಜು, ಆಲ್ಕೋಡ್ ಹನುಮಂತಪ್ಪ, ಶಾಸಕರಾದ ನೇಮಿರಾಜ ನಾಯಕ್, ರಾಜೂಗೌಡ, ಬಿ.ಎಂ.ಫಾರೂಕ್, ಮಾಜಿ ಶಾಸಕರಾದ ಸುರೇಶ್ ಗೌಡ,  ಕೆ.ಎಂ.ತಿಮ್ಮರಾಯಪ್ಪ ವೀರಭದ್ರಪ್ಪ ಹಾಲರವಿ, ಎಂ.ಕೃಷ್ಣಾರೆಡ್ಡಿ, ದೊಡ್ಡಪ್ಪ ಗೌಡ, ಕೆ.ಬಿ.ಪ್ರಸನ್ನ ಕುಮಾರ್, ಸುನೀತಾ ಚೌವ್ಹಾಣ್, ಸಿ.ವಿ.ಚಂದ್ರಶೇಖರ್, ಸುಧಾಕರ್ ಶೆಟ್ಟಿ, ಸೂರಜ್ ಸೋನಿ ನಾಯಕ್ ಸೇರಿ 21 ಸದಸ್ಯರಿದ್ದಾರೆ. ಕೋರ್ ಕಮಿಟಿಗೆ ಪೂರ್ಣ ಅಧಿಕಾರ ನೀಡಲಾಗಿದೆ ಎಂದು ತಿಳಿಸಿದರು.

RELATED ARTICLES

Related Articles

TRENDING ARTICLES