Monday, December 23, 2024

IRE vs IND : ಟೀಂ ಇಂಡಿಯಾಗೆ 140 ರನ್ ಟಾರ್ಗೆಟ್

ಬೆಂಗಳೂರು : ಟೀಂ ಇಂಡಿಯಾ ವಿರುದ್ಧದ ಮೊದಲ ಟಿ-20 ಪಂದ್ಯದಲ್ಲಿ ಐರ್ಲೆಂಟ್ ತಂಡ ಸವಾಲಿನ ಟಾರ್ಗೆಟ್ ಕಲೆಹಾಕಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಐರ್ಲೆಂಡ್ ನಿಗದಿತ 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 139 ರನ್ ಗಳಿಸಿತು.

ಆರಂಭಿಕ ಬ್ಯಾಟರ್​ಗಳ ವೈಫಲ್ಯದ ಹೊರತಾಗಿಯೂ ಮಧ್ಯಮ ಕ್ರಮಾಂಕದಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶನ ತೋರಿದ ಬ್ಯಾರಿ ಮೆಕಾರ್ಥಿ ಅಜೇಯ 51* ಹಾಗೂ ಕರ್ಟಿಸ್ ಕ್ಯಾಂಪರ್ 39 ರನ್​ ಗಳಿಸಿ ತಂಡದ ಮೊತ್ತವನ್ನು ಮೂರಂಕಿ ಗಡಿ ದಾಟಿಸಿದರು.

ಟೀಂ ಇಂಡಿಯಾ ಪರ ನಾಯಕ ಬುಮ್ರಾ, ಕನ್ನಡಿಗ ಪ್ರಸಿದ್ಧ್ ಕೃಷ್ಣ ಹಾಗೂ ರವಿ ಬಿಷ್ನೋಯ್ ತಲಾ ಎರಡು ವಿಕೆಟ್ ಪಡೆದು ಮಿಂಚಿದರು. ಅರ್ಷದೀಪ್ 1 ವಿಕೆಟ್ ಪಡೆದರು.

RELATED ARTICLES

Related Articles

TRENDING ARTICLES