Friday, December 27, 2024

ಭೂಮಿ ಮೋಹಕ್ಕೆ ಸೌಜನ್ಯ ಅತ್ಯಾಚಾರ : ವಸಂತ ಬಂಗೇರ ಹೊಸ ಬಾಂಬ್

ಮಂಗಳೂರು : ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ, ಕೊಲೆಗೆ ಭೂಮಿ(ಜಮೀನು) ಮೋಹ ಕಾರಣ ಎಂದು ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಹೊಸ ಬಾಂಬ್ ಸಿಡಿಸಿದ್ದಾರೆ.

ಬೆಳ್ತಂಗಡಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿರುವ ಅವರು, ಧರ್ಮಸ್ಥಳ ಹೆಗಡೆ ಪರಿವಾರದ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.

ಹೆಗಡೆ ಪರಿವಾರದಂತಹ ಜಮೀನ್ದಾರರು ಹುಟ್ಟಲೇಬಾರದು. ತಾಲೂಕಿನ ಎಲ್ಲಾ ಜಮೀನುಗಳನ್ನು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ನನ್ನ ತಂದೆಯೂ ಜಮೀನ್ದಾರ ಆಗಿದ್ದವರು. ಆದರೆ, ಯಾರ್ಯಾರ ಜಮೀನನ್ನು ವಶಪಡಿಸಿಕೊಳ್ಳಲು ನಾನು ಬಿಡಲಿಲ್ಲ. ಆ ಕಾರಣಕ್ಕಾಗಿ ನನ್ನ ಹೆಸರಿನಲ್ಲಿ ಇಂದಿಗೂ ಯಾವುದೇ ಜಮೀನಿಲ್ಲ ಎಂದು ಗುಡುಗಿದ್ದಾರೆ.

ಬಿಟ್ಟಿಯಾಗಿ ಜಮೀನು ಸಿಕ್ರೆ ಖುಷಿ

ರಾಜ್ಯ ಹೆದ್ದಾರಿ, ರಾಷ್ಟ್ರೀಯ ಹೆದ್ದಾರಿಗಳ ಪಕ್ಕದ ಜಮೀನುಗಳನ್ನೇ ವಶಪಡಿಸಿಕೊಳ್ಳುತ್ತಿದ್ದಾರೆ. ಬಿಟ್ಟಿಯಾಗಿ ಜಮೀನು ಸಿಕ್ಕಿದರೆ ಆ ಪರಿವಾರಕ್ಕೆ ಭಾರಿ ಖುಷಿ. ಹಣ ಕೊಟ್ಟು ಜಮೀನು ಪಡೆದಿದ್ದರೆ ಅವರಿಗೆ ಕೊಂಚ ಬಿಸಿ. ಇಂತಹ ಜಮೀನ್ದಾರಿಕೆಯನ್ನು ವಿರೋಧಿಸಬೇಕು. ವಿರೋಧಿಸದೇ ಇದ್ದಲ್ಲಿ ಇಂತಹ ಘಟನೆಗಳು ನಡೆಯುತ್ತದೆ ಎಂದು ಕಿಡಿಕಾರಿದ್ದಾರೆ.

ಸೌಜನ್ಯ ಪ್ರಕರಣವೂ ಇದೇ ಕಾರಣಕ್ಕೆ ನಡೆದಿರುವುದು. ಸೌಜನ್ಯ ಕೊಲೆ ನಡೆದಿರುವುದೂ ಜಾಗದ ವಿಚಾರಕ್ಕಾಗಿ ಎಂದು ಸಾರ್ವಜನಿಕ ವೇದಿಕೆಯಲ್ಲಿ ವಸಂತ ಬಂಗೇರ ಹೇಳಿಕೆ ನೀಡಿದ್ದಾರೆ. ಇದು ಕರಾವಳಿಯಲ್ಲಿ ಸಂಚಲನ ಸೃಷ್ಟಿಸಿದೆ.

RELATED ARTICLES

Related Articles

TRENDING ARTICLES