Sunday, January 19, 2025

ನಾವು ಕಾಂಗ್ರೆಸ್​ನವರನ್ನು ನಿರ್ಲಕ್ಷ್ಯ ಮಾಡಲ್ಲ : ಸಿ.ಟಿ. ರವಿ

ಮೈಸೂರು : ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನಾವು ಕಾಂಗ್ರೆಸ್​ನವರನ್ನು ನಿರ್ಲಕ್ಷ್ಯ ಮಾಡಲ್ಲ. ಅವರನ್ನು ನಿರ್ಲಕ್ಷ್ಯ ಮಾಡಿದ ಪರಿಣಾಮ ಅಧಿಕಾರ ಕಳೆದುಕೊಂಡೆವು ಎಂದು ಮಾಜಿ ಸಚಿವ ಸಿ.ಟಿ. ರವಿ ಹೇಳಿದರು.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಕಾಂಗ್ರೆಸ್​ ಉಚಿತ ಗ್ಯಾರಂಟಿ ಚರ್ಚೆಗೆ ಕೌಂಟರ್ ಮಾಡಲಿಲ್ಲ. ಪೇ ಸಿಎಂ ಹೇಳಿದ್ದಾಗ ಕ್ರಮ ತೆಗೆದುಕೊಳ್ಳಲಿಲ್ಲ. ಇದರ ಪರಿಣಾಮ ಅನುಭವಿಸುತ್ತಿದ್ದೇವೆ ಎಂದು ತಿಳಿಸಿದರು.

ಇದರಿಂದ ಡಿ.ಕೆ ಶಿವಕುಮಾರ್ ಆಗಲಿ, ಕಾಂಗ್ರೆಸ್ ಚಿಂತನೆಯನ್ನ ನಿರ್ಲಕ್ಷ್ಯ ಮಾಡಲ್ಲ. ನಾವು ಜನರ ಮುಂದೆ ಹೋಗುತ್ತೇವೆ. ನಮ್ಮ ತಪ್ಪು ತಿದ್ದುಕೊಂಡು ಮುಂದೆ ಹೋಗುತ್ತೇವೆ ಎಂದು ಸಿ.ಟಿ.ರವಿ ಹೇಳಿದರು.

ಲೋಕಸಭೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರವಾಗಿ ಮಾತನಾಡಿ, ಬಿಜೆಪಿ 28 ಸ್ಥಾನ ಗೆಲ್ಲಬೇಕು. ಅದಕ್ಕೆ ಏನು ಅಗತ್ಯ ಇದೆ ಅದೆಲ್ಲ ಮಾಡ್ತೀವಿ. ನಮ್ಮ ಹತ್ತಿರ ಮೈತ್ರಿ ಪ್ರಶ್ನೆ ಬಂದಿಲ್ಲ. ನಾವು 28 ಸ್ಥಾನ ಗೆಲ್ಲೋಕೆ ಏನು ಬೇಕು ಅದನ್ನು ಮಾಡ್ತೀವಿ ಎನ್ನುವ ಮೂಲಕ ಮೈತ್ರಿ ಗುಟ್ಟು ಬಿಟ್ಟು ಕೊಡದೆ ಜಾಣ್ಮೆಯ ಉತ್ತರ ನೀಡಿದರು.

RELATED ARTICLES

Related Articles

TRENDING ARTICLES