ಬೆಂಗಳೂರು : ನಗರದಲ್ಲಿ ದಿನೇ ದಿನೇ ರೇಬಿಸ್‌ನಿಂದ ಬಳಲುತ್ತಿರುವವರ ಸಂಖ್ಯೆ ನಿಧಾನವಾಗಿ ಏರಿಕೆಯಾಗುತ್ತಿದೆ ರೇಬಿಸ್ ಹತೋಟಿಗೆ ತರಲು ಆರೋಗ್ಯ ಇಲಾಖೆ ಸಿದ್ದತೆ ಮಾಡಿಕೊಳ್ಳಲ ಎಂದು ಆರೋಗ್ಯ ಇಲಾಖೆ ಆಯುಕ್ತ ರಂದೀಪ್ ತಿಳಿಸಿದರು.
ನಗರದ ತಮ್ಮ ಕಛೇರಿಲ್ಲಿ ಮಾತನಾಡಿದ ಅವರು, ಬೆಂಗಳೂರು ನಗರದಲ್ಲಿ ನಾಯಿಗಳ ಹಾವಳಿ ಮಿತಿಮೀರಿದ್ದು ಸಾರ್ವಜನಿಕರು ನಾಯಿಗಳ ದಾಳಿಗೆ ತುತ್ತಾಗುತ್ತಿದ್ದಾರೆ, ನಾಯಿ ಕಚ್ಚಿದ ತಕ್ಷಣವೇ ಸೂಕ್ತ ಚುಚ್ಚು ಮದ್ದು ಹಾಕಿಸಿಕೊಳ್ಳುವುದು ಉತ್ತಮ ಇಲ್ಲದಿದ್ದಲ್ಲಿ ಸಾವು ಸಂಭವಿಸುವ ಸಾಧ್ಯತೆ ಹೆಚ್ಚು.
ಆರೋಗ್ಯ ಇಲಾಖೆ ವತಿಯಿಂದ ಸಾರ್ವಜನಿಕರಿಗೆ ರೇಬಿಸ್ ಕುರಿತು ಅರಿವು ಮೂಡಿಸಲು ಸಿದ್ದತೆ ಮಾಡಿಕೊಳ್ಳಲಾಗಿದ್ದು ರೋಗ ತಡೆಗಟ್ಟಲು ಬೇಕಾದ ಔಷಧಿ, ಚುಚ್ಚುಮದ್ದುಗಳನ್ನು ಸಂಗ್ರಹ ಮಾಡಿಟ್ಟುಕೊಳ್ಳಲಾಗಿದೆ
ಯಾವುದೇ ಕಾರಣಕ್ಕೂ ರೇಬಿಸ್ ಔಷಧಿಗಳ ಪೂರೈಕೆ ಕೊರತೆಯಾಗದಂತೆ ಜಾಗೃತಿ ವಹಿಸಲು KSMSCL ಗೆ ಸೂಚನೆ ನೀಡಿದ್ದು ಸರ್ಕಾರಿ ಹಾಗೂ ನಗರ ಪ್ರಾಥಮಿಕ ಕೇಂದ್ರಗಳಲ್ಲಿ ಅಗತ್ಯವಿರುವಷ್ಟು ಚುಚ್ಚು ಮದ್ದುಗಳ ಸಂಗ್ರಹ ಮಾಡಲಾಗಿದೆ ಪರಿಸ್ಥಿತಿ ಕೈ ಮೀರದಂತೆ ನೋಡಿಕೊಳ್ಳಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.