Monday, December 23, 2024

ದಶಪಥ ಹೆದ್ದಾರಿಯಲ್ಲಿ ಮತ್ತೊಂದು ಅಪಘಾತ

ರಾಮನಗರ : ಚಾಲಕನಿಗೆ ತಲೆ ಸುತ್ತು ಬಂದು ಡಿವೈಡರ್‌ಗೆ ಕಾರು ಗುದ್ದಿರುವ ಘಟನೆ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯ ರಾಮನಗರ ತಾಲ್ಲೂಕಿನ ಮಾಯಗಾನಹಳ್ಳಿ ಗ್ರಾಮದ ಬಳಿ ನಡೆದಿದೆ.

ಡಿವೈಡರ್​​ಗೆ ಗುದ್ದಿದ ರಭಸಕ್ಕೆ ಕಾರು ಪಲ್ಟಿಯಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಸವಾರರು ಪಾರಾಗಿದ್ದಾರೆ. ಈ ನಾಲ್ವರು ಚನ್ನಪಟ್ಟಣದಿಂದ ಬೆಂಗಳೂರಿಗೆ ತೆರಳುತ್ತಿದ್ದರು. ಸ್ಥಳಕ್ಕೆ ರಾಮನಗರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಥಳದಲ್ಲೇ ಮಹಿಳೆ ಸಾವು

ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಹೇಮಗಿರಿ ಗೇಟ್ ಬಳಿ ನಡೆದಿದೆ.

ಅರಸೀಕೆರೆ ತಾಲೂಕಿನ ಮಾವುತನಹಳ್ಳಿ ಗ್ರಾಮದ ಕಲ್ಲಮ್ಮ (60) ಸಾವನ್ನಪ್ಪಿರುವ ಮಹಿಳೆ. ಘಟನೆ ಬಳಿಕ ಕಾರನ್ನು ಸ್ಥಳದಲ್ಲೇ ಬಿಟ್ಟು ಕಾರು ಚಾಲಕ ಪರಾರಿಯಾಗಿದ್ದಾನೆ.

ಕಾರು ಡಿಕ್ಕಿ ರಭಸಕ್ಕೆ ಬೈಕ್ ನಲ್ಲಿದ್ದ ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಮತ್ತಿಬ್ಬರ ಸ್ಥಿತಿ ಗಂಭೀರವಾಗಿದೆ. ಗಂಭೀರ ಗಾಯಗೊಂಡ ಇಬ್ಬರು ಕಡೂರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಸಂಬಂಧ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

Related Articles

TRENDING ARTICLES