Wednesday, January 22, 2025

ವಿಷ ಬಿತ್ತಿ, ವಿಷ ಬೆಳೆದು, ವಿಷವನ್ನೇ ಉಣ್ಣುವಾಗ ಆರೋಗ್ಯ ವೃದ್ಧಿ ಎಲ್ಲಿ? : ಕೋಡಿಶ್ರೀ

ಬೆಳಗಾವಿ : ವಿಷವನ್ನೇ ಬಿತ್ತಿ, ವಿಷವನ್ನೇ ಬೆಳೆದು, ವಿಷವನ್ನೇ ಉಣ್ಣುವಾಗ ಆರೋಗ್ಯ ವೃದ್ಧಿ ಹೇಗೆ ಸಾಧ್ಯ? ಎಂದು ಕೋಡಿಮಠದ ಡಾ. ಶಿವಾನಂದ ಸ್ವಾಮೀಜಿ ಪ್ರಶ್ನಿಸಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಕೆಲವರಿಗೆ ದೈವಬಲ ಇದ್ದರೂ ತೊಂದರೆ ಆಗುತ್ತದೆ, ಪ್ರಕೃತಿ ನಿಯಮವದು. ಪ್ರಾಕೃತಿಕ ದೋಷದಿಂದಲೇ ಸಾವು-ನೋವು ಹೆಚ್ಚುತ್ತಿವೆ ಎಂದು ಭವಿಷ್ಯ ನುಡಿದಿದ್ದಾರೆ.

ಆಹಾರ ಪದ್ಧತಿಯಲ್ಲಿ ಬದಲಾವಣೆ ಆಗುತ್ತಿದೆ. ಕೆಮಿಕಲ್ ಮಿಶ್ರಿತ ಆಹಾರ ಸೇವನೆ ಹೆಚ್ಚುತ್ತಿದೆ. ಸೀಮೆ ಗೊಬ್ಬರ, ದನದ ಗೊಬ್ಬರ ಹಾಕಿ ಬೆಳೆ ಮೊದಲು ಬೆಳೆಯಲಾಗುತ್ತಿತ್ತು. ಈಗ ಕೆಮಿಕಲ್ ಸಿಂಪಡಣೆ ಹೆಚ್ಚುತ್ತಿದೆ, ಹಣ್ಣಿಗೂ ಕೆಮಿಕಲ್ ಹಾಕಲಾಗುತ್ತಿದೆ. ವಿಷವನ್ನೆ ಬಿತ್ತಿ, ವಿಷವನ್ನೇ ಬೆಳೆದು, ವಿಷವನ್ನೇ ಉಣ್ಣುವಾಗ ಆರೋಗ್ಯ ವೃದ್ಧಿ ಹೇಗೆ ಸಾಧ್ಯ? ಪ್ರಕೃತಿ ಕೂಡ ಮುನಿಸಿಕೊಳ್ಳುವ ಸ್ಥಿತಿ ಇದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : ನೀವು ಕಪಿಗಳು, ಕಪಿಚೇಷ್ಠೆ ಮಾಡುತ್ತಿದ್ದೀರಿ : ಹರಿಪ್ರಸಾದ್ ಗುಡುಗು

ದೈವ, ನಂಬಿಕೆ ಮೇಲೆ ಜೀವನ ಮಾಡ್ಬೇಕು

ಗಿಡಮರಗಳನ್ನು ಮನುಷ್ಯ ನಾಶ ಮಾಡುತ್ತಿದ್ದಾನೆ. ಈ ಪ್ರಕೃತಿಯ ದೋಷ ಮನುಕುಲಕ್ಕೆ ಇದೆ. ಮೊದಲು ಅಂತರ್ಜಲ‌ ಹೆಚ್ಚಿತ್ತು, ಈಗ ಆಳವಾಗಿ ಬೋರವೆಲ್ ಕೊರೆಸಬೇಕು. ಹೀಗಾಗಿ, ಪ್ರಳಯ ಜಾಸ್ತಿ ಆಗ್ತಿವೆ. ಮನುಷ್ಯ ಅತಿವೇಗದಲ್ಲಿ ಹಣ ಮಾಡಲು ಹೊರಟಿದ್ದಾನೆ. ಹೀಗಾಗಿ, ಆಪತ್ತು ಹೆಚ್ಚಿವೆ. ಇದೆಲ್ಲದರ ನಿಯಂತ್ರಣಕ್ಕೆ ಭಗವಂತನಿದ್ದಾನೆ. ಆದರೆ, ಮನುಷ್ಯ ಈತನನ್ನು ಮರೆತಿದ್ದಾನೆ. ದೈವ, ನಂಬಿಕೆ ಮೇಲೆ ಜೀವನ ಮಾಡಬೇಕು. ಇವುಗಳನ್ನು ಕಳೆದುಕೊಂಡ ಪರಿಣಾಮವೇ ಅನಾಹುತ ಆಗ್ತಿವೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಇನ್ನೂ ಚಂದ್ರಯಾನ-3 ಮಿಷ್ ಯಶಸ್ಸಿನ ಕುರಿತಂತೆ ಮಾತನಾಡಿರುವ ಅವರು, ಚಂದ್ರಯಾನ-3 ಯಶಸ್ವಿಯಾಗಿ ಒಳ್ಳೆಯದಾಗಲಿದೆ ಎಂದು ನುಡಿದಿದ್ದಾರೆ.

RELATED ARTICLES

Related Articles

TRENDING ARTICLES