Wednesday, January 22, 2025

IND vs IRE : ಟಾಸ್ ಸೋತ ಭಾರತ, ಬ್ಯಾಟಿಂಗ್

ಬೆಂಗಳೂರು : ಭಾರತ ವಿರುದ್ಧದ ಎರಡನೇ ಟಿ-20 ಪಂದ್ಯದಲ್ಲಿ ಟಾಸ್ ಗೆದ್ದ ಐರ್ಲೆಂಡ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ಡಬ್ಲಿನ್​ನಲ್ಲಿ ಪಂದ್ಯ ನಡೆಯಲಿದ್ದು, ಜಸ್ಪ್ರೀತ್ ಬುಮ್ರಾ ಬಳಗ ಮೊದಲು ಬ್ಯಾಟಿಂಗ್ ಮಾಡಲಿದೆ. ಮೊದಲ ಪಂದ್ಯದಲ್ಲಿ ಗೆಲುವು ಸಾಧಿಸಿರುವ ಟೀಂ ಇಂಡಿಯಾ ಈ ಪಂದ್ಯವನ್ನು ಗೆದ್ದು ಸರಣಿ ವಶಪಡಿಸಿಕೊಳ್ಳಲು ಹವಣಿಸುತ್ತಿದೆ.

ಐರ್ಲೆಂಡ್ ಪಾಲಿಗೆ ಇಂದಿನ ಪಂದ್ಯ ಮಾಡು ಇಲ್ಲವೇ ಮಾಡಿ ಪಂದ್ಯ. ಗೆಲ್ಲಲ್ಲೇಬೇಕಾದ ಒತ್ತಡದಲ್ಲಿರುವ ಐರ್ಲೆಂಡ್ ಟೀಂ ಇಂಡಿಯಾಗೆ ಸೋಲಿನ ರುಚಿ ಮುಟ್ಟಿಸಲು ರಣತಂತ್ರ ರೂಪಿಸಿದೆ.

ಭಾರತ ತಂಡ

ಋತುರಾಜ್ ಗಾಯಕ್ವಾಡ್ (ಉಪನಾಯಕ), ಯಶಸ್ವಿ ಜೈಸ್ವಾಲ್, ಜಸ್ಪ್ರೀತ್ ಬುಮ್ರಾ (ನಾಯಕ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ರಿಂಕು ಸಿಂಗ್, ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ರವಿ ಬಿಷ್ಣೋಯ್

ಐರ್ಲೆಂಡ್ ತಂಡ

ಆಂಡ್ರ್ಯೂ ಬಾಲ್ಬಿರ್ನಿ, ಪಾಲ್ ಸ್ಟಿರ್ಲಿಂಗ್ (ನಾಯಕ), ಲೋರ್ಕನ್ ಟಕರ್(ವಿಕೆಟ್ ಕೀಪರ್), ಹ್ಯಾರಿ ಟೆಕ್ಟರ್, ಕರ್ಟಿಸ್ ಕ್ಯಾಂಫರ್, ಜಾರ್ಜ್ ಡಾಕ್ರೆಲ್, ಮಾರ್ಕ್ ಅಡೇರ್, ಬ್ಯಾರಿ ಮೆಕಾರ್ಥಿ, ಕ್ರೇಗ್ ಯಂಗ್, ಜೋಶುವಾ ಲಿಟಲ್, ಬೆಂಜಮಿನ್ ವೈಟ್

RELATED ARTICLES

Related Articles

TRENDING ARTICLES