Friday, January 3, 2025

IND vs IRE : ಋತು-ರಿಂಕು ಅಬ್ಬರ, ಐರ್ಲೆಂಡ್​ಗೆ ಬೃಹತ್ ಟಾರ್ಗೆಟ್

ಬೆಂಗಳೂರು : ಐರ್ಲೆಂಡ್ ವಿರುದ್ಧದ ಎರಡನೇ ಟಿ-20 ಪಂದ್ಯದಲ್ಲಿ ಟೀಂ ಇಂಡಿಯಾ ಬೃಹತ್ ಟಾರ್ಗೆಟ್ ಕಲೆಹಾಕಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ನಿಗದಿತ 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 185 ರನ್​ ಗಳಿಸಿತು.

ಟೀಂ ಇಂಡಿಯಾ ಪರ ಬೊಂಬಾಟ್ ಆಟ ಪ್ರದರ್ಶಿಸಿದ ಆರಂಭಿಕ ಬ್ಯಾಟರ್ ಋತುರಾಜ್ ಗಾಯಕ್ವಾಡ್ ಅರ್ಧಶತಕ(58) ಬಾರಿಸಿದರು. ಸಂಜು ಸ್ಯಾಮ್ಸನ್ 40 ರನ್ ಗಳಿಸಿದರೆ, ಯಶಸ್ವಿ ಜೈಸ್ವಾಲ್ 18, ರಿಂಕು ಸಿಂಗ್ 38 ಹಾಗೂ ಶಿವಂ ದುಬೆ 22 ರನ್​ ಗಳಿಸಿದರು. ಐರ್ಲೆಂಡ್ ಪರ ಬ್ಯಾರಿ ಮೆಕಾರ್ಥಿ 2, ಕ್ರೇಗ್ ಯಂಗ್ ಮತ್ತು ವೈಟ್ ತಲಾ ಒಂದು ವಿಕೆಟ್ ಪಡೆದರು.

ಇನ್ನಿಂಗ್ಸ್​ ಆರಂಭಿಸಿದ ಭಾರತ ಜೈಸ್ವಾಲ್ ಹಾಗೂ ತಿಲಕ್ ವರ್ಮಾ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಈ ವೇಳೆ ಋತುರಾಜ್ ಜೊತೆ ಸೇರಿಕೊಂಡ ಸ್ಯಾಮ್ಸನ್ ಜವಾಬ್ದಾರಿಯುತ ಆಟವಾಡಿದರು. 26 ಎಸೆತಗಳಲ್ಲಿ 5 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ 40 ರನ್ ಗಳಿಸಿದರು. ನಂತರ ಕ್ರೀಸ್​ಗೆ ಬಂದ ರಿಂಕು ಸಿಂಗ್ 21 ಎಸೆತಗಳಲ್ಲಿ 3 ಸಿಕ್ಸರ್ ಹಾಗೂ 2 ಬೌಂಡರಿಗಳೊಂದಿಗೆ 38 ರನ್ ಸಿಡಿಸಿದರು. ಶಿವಂ ದುಬೆ 16 ಎಸೆತಗಳಲ್ಲಿ 2 ಸಿಕ್ಸರ್ ನೆರವಿನಿಂದ 22 ರನ್ ಗಳಿಸಿ ತಂಡದ ಮೊತ್ತ 180ರ ಗಡಿದಾಟಿಸಿದರು.

RELATED ARTICLES

Related Articles

TRENDING ARTICLES