Sunday, December 22, 2024

ಕೋಡಿಶ್ರೀ ಮತ್ತೊಂದು ಸ್ಫೋಟಕ ಭವಿಷ್ಯ

ಬೆಳಗಾವಿ : ನಿಖರ ಭವಿಷ್ಯವಾಣಿಗೆ ಪ್ರಖ್ಯಾತರಾಗಿರುವ ಕೋಡಿಮಠದ ಡಾ. ಶಿವಾನಂದ ಸ್ವಾಮೀಜಿ ಮತ್ತೊಂದು ಆಘಾತಕಾರಿ ಭವಿಷ್ಯ ನುಡಿದಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿರುವ ಅವರು, ಶ್ರಾವಣ ಮಾಸದ ಮಧ್ಯಂತರದಲ್ಲಿ ಜಾಗತಿಕ ಮಟ್ಟದಲ್ಲಿ ವಿಪರೀತ ಮಳೆಯಾಗಲಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಯುದ್ಧ ಭೀತಿಯಿದೆ. ಭೂಕಂಪನಗಳು, ಸುನಾಮಿಗಳಿಂದ ಹೆಚ್ಚಿನ ಜನರ ಸಾವು-ನೋವು ಸಂಭವಿಸುತ್ತೆ ಎಂದು ಹೇಳಿದ್ದಾರೆ.

ವಿಷಾನೀಲ ಬೀಸುವ ಪ್ರಸಂಗವೂ ಇದೆ. ಅದು ಎಲ್ಲ ಕಡೆಯೂ ವ್ಯಾಪಿಸಲಿದೆ. ವಿಪರೀತ ಮಳೆಯಿಂದ ಎರಡು ದೇಶಗಳು ನಾಶ ಆಗುತ್ತೆ. ಭಾರತದಲ್ಲಿ ಜಲಪ್ರಳಯ ಆಗುವ ಲಕ್ಷಣಗಳಿವೆ. ದಕ್ಷಿಣ ಭಾರತದಲ್ಲಿ ಸಮೃದ್ಧಿಯಾಗುವ ಲಕ್ಷಣಗಳಿವೆ, ಯಾವುದೇ ತೊಂದರೆಯಿಲ್ಲ. ಭೂಕಂಪನದಿಂದ ದೊಡ್ಡ ದೊಡ್ಡ ನಗರಗಳಿಗೆ ಅಪಾಯವಿದೆ. ಇದ್ದಕ್ಕಿದ್ದಂತೆ ಜನರ ಸಾವಾಗುವ ಆತಂಕವಿದೆ ಎಂದು ನುಡಿದಿದ್ದಾರೆ.

ಜಾಗತಿಕ ಮಟ್ಟದಲ್ಲಿ ವಿಷಾನೀಲದ ಪರಿಣಾಮ ಭಾರತದ ಮೇಲೂ ಆಗಲಿದೆ. ಜಗತ್ತಿನ ಸಾಮ್ರಾಟಗಳ ತಲ್ಲಣಗೊಳ್ಳುವ ಪ್ರಸಂಗವೂ ಇದೆ. ಅದರ ಬಗ್ಗೆ ಜನರು ಎಚ್ಚರಿಕೆ ವಹಿಸಬೇಕು ಎಂದು ಕೋಡಿ ಶ್ರೀ ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES