Sunday, September 22, 2024

ಯಾರೊಂದಿಗೂ ಮೈತ್ರಿ ಇಲ್ಲ : HDK ಸ್ಪಷ್ಟನೆ

ಮೈಸೂರು : ನೋಡಿ ಬ್ರದರ್.. ಯಾರೊಂದಿಗೂ ಮೈತ್ರಿ ಇಲ್ಲ. ಮೈತ್ರಿ ಬಗ್ಗೆ ಚರ್ಚೆಯೇ ಆಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಯಾರೂ ಮೈತ್ರಿಗೆ ಮುಂದೆ ಬಂದಿಲ್ಲ. ಯಾರೂ ಮುಂದೆ ಬಾರದೆ ಇದ್ದಾಗ ಯಾರೊಂದಿಗೆ ಮೈತ್ರಿ ಮಾಡಿಕೊಳ್ಳೋದು? ಎಂದು ಪ್ರಶ್ನೆ ಮಾಡಿದ್ದಾರೆ.

ನಮ್ಮ ಪಕ್ಷದ ಸಂಘಟನೆಗೆ ವಿಶೇಷ ಒತ್ತು ನೀಡಬೇಕಿದೆ. ಇದಕ್ಕಾಗಿ ಜಿ.ಟಿ. ದೇವೇಗೌಡರ ಅಧ್ಯಕ್ಷತೆಯಲ್ಲಿ ಕೋರ್ ಕಮಿಟಿ ಮಾಡಿದ್ದೇವೆ. ಅವರ ನೇತೃತ್ವದಲ್ಲಿ ನಾಲ್ಕು ತಂಡಗಳಲ್ಲಿ ರಾಜ್ಯ ಪ್ರವಾಸ ಮಾಡುತ್ತೇವೆ. ರಾಜ್ಯ ಸರ್ಕಾರದ ವೈಫಲ್ಯಗಳನ್ನು ಜ‌ನರಿಗೆ ಮನವರಿಕೆ ಮಾಡಬೇಕಿದೆ. ಇದರ ಜತೆಗೆ ಲೋಕಸಭಾ ಚುನಾವಣೆಯೂ ಬರುತ್ತಿದೆ. ರಾಜಕೀಯ ಪಕ್ಷವಾಗಿ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ ಎಂದು ಹೇಳಿದ್ದಾರೆ.

86 ಸಾವಿರ ಕೋಟಿ ಸಾಲ ತೀರಿಸೋದು ಯಾರು?

ಗ್ಯಾರಂಟಿ ಯೋಜನೆಗಳಿಗಾಗಿ 86 ಸಾವಿರ ಕೋಟಿ ಸಾಲ ಆಗಿದೆ. ಈಗ ಮಾಡಿದ ಸಾಲ ತೀರಿಸುವವರು ಯಾರು? ಗ್ಯಾರಂಟಿ ಹೆಸರಿನಲ್ಲಿ ಜನರಿಗೆ ಮೋಸ ಮಾಡಲಾಗುತ್ತಿದೆ. 200 ಯೂನಿಟ್ ವಿದ್ಯುತ್ ಉಚಿತ ಅಂದಿದ್ದರು. ಈಗ ಕಂಡೀಷನ್ ಮೇಲೆ ಕಂಡೀಷನ್ ಹಾಕುತ್ತಿದ್ದಾರೆ. ಗ್ಯಾರಂಟಿ ಯೋಜನೆಗಳ ಕಾರಣಕ್ಕಾಗಿ ಅಭಿವೃದ್ಧಿ ನಿಂತೇ ಹೋಗಿದೆ. ಶಾಸಕರಿಗೆ ಅನುದಾನ ಸಿಗುತ್ತಿಲ್ಲ. ಮುಂದೆ ಇದೆಲ್ಲ ಎಲ್ಲಿಗೆ ಹೋಗಿ ನಿಲ್ಲುತ್ತೆ ನೋಡುತ್ತಿರಿ ಎಂದು ಕುಮಾರಸ್ವಾಮಿ ಗುಡುಗಿದ್ದಾರೆ.

RELATED ARTICLES

Related Articles

TRENDING ARTICLES