Monday, December 23, 2024

ಬಿಜೆಪಿ ಬಂದ್ಮೇಲೆ ‘ಉಳ್ಳವನೇ ಭೂಮಿ ಒಡೆಯ’ : ಸಿದ್ದರಾಮಯ್ಯ

ಬೆಂಗಳೂರು : ದೇವರಾಜ ಅರಸರು ಹೋರಾಟ ಮಾಡಿದ ಉದ್ದೇಶ ‘ಉಳುವವನೇ ಭೂಮಿ ಒಡೆಯ’ ಆಗಬೇಕು ಎನ್ನುವುದಾಗಿತ್ತು. ಆದರೆ, ಈಗ ಬಿಜೆಪಿ ಬಂದ ಮೇಲೆ ‘ಉಳ್ಳವನೇ ಭೂಮಿ ಒಡೆಯ’ ಎನ್ನುವಂತಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಕಿದರು.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​ನಲ್ಲಿ ಹಮ್ಮಿಕೊಂಡಿದ್ದ ದೇವರಾಜ ಅರಸು ಅವರ 108ನೇ ಜನ್ಮ ದಿನಾಚರಣೆ ಹಾಗೂ ಡಿ.ದೇವರಾಜ ಅರಸು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಕಾಗೋಡು ಹೋರಾಟ ಮತ್ತು ಗೇಣಿ ಹೋರಾಟದ ಫಲಾನುಭವಿಗಳು ಮತ್ತು ಈಗಿನ ಪೀಳಿಗೆಯ ಯುವಕ, ಯುವತಿಯರು ಇದನ್ನೆಲ್ಲಾ ಅರ್ಥ ಮಾಡಿಕೊಂಡು ಸಾಮಾಜಿಕ ನ್ಯಾಯದ ಪರವಾಗಿ ಇರಬೇಕು ಎಂದು ಹೇಳಿದರು.

ನ್ಯಾಯ ಒದಗಿಸಿದ ಚರಿತ್ರೆ ನಾಡಿಗಿದೆ

ಅಧಿಕಾರ ಮತ್ತು ಸಂಪತ್ತು ಕೆಲವರ ಕೈಯಲ್ಲಿ ಮಾತ್ರ ಇರಬಾರದು ಎನ್ನುವ ಆಶಯ ಬಸವಣ್ಣನವರ ಕಾಲದಿಂದಲೂ ಈ ನೆಲದಲ್ಲಿ ನೆಲೆಯೂರಿದೆ. ಸಾಮಾಜಿಕ ನ್ಯಾಯವನ್ನು ಕ್ರಾಂತಿಕಾರಿಯಾಗಿ ಜಾರಿ ಮಾಡಿದ ಇತಿಹಾಸವನ್ನು ಕನ್ನಡ ನೆಲ ಹೊಂದಿದೆ. ಬಸವಣ್ಣನವರಿಂದ ಹಿಡಿದು ಕೃಷ್ಣರಾಜ ಒಡೆಯರು ಮತ್ತು ದೇವರಾಜ ಅರಸು ಅವರ ವರೆಗೆ ಸಾಮಾಜಿಕ ನ್ಯಾಯ ಒದಗಿಸಿದ ಚರಿತ್ರೆ ನಮ್ಮ ನಾಡಿಗಿದೆ ಎಂದರು.

ಎಲ್ಲಾ ಜಾತಿಸಮುದಾಯಗಳ ವಿಶ್ವಾಸ

ಸಂವಿಧಾನದಲ್ಲಿ ಮೀಸಲಾತಿಗೆ ಅವಕಾಶ ಇದ್ದರೂ ಅದು ಜಾರಿ ಆಗಿರಲಿಲ್ಲ. ರಾಜ್ಯದಲ್ಲಿ ದೇವರಾಜ ಅರಸರು‌ ಮುಖ್ಯಮಂತ್ರಿಯಾಗಿ ಹಾವನೂರು ವರದಿ ತರಿಸಿಕೊಂಡು ಅದನ್ನು ಜಾರಿ ಮಾಡುವ ಎದೆಗಾರಿಕೆ ತೋರಿಸಿದರು. ಹೀಗೆ ಮಾಡುವಾಗ ಎಲ್ಲಾ ಜಾತಿ-ಸಮುದಾಯಗಳನ್ನೂ ವಿಶ್ವಾಸಕ್ಕೆ ತೆಗೆದುಕೊಂಡರು. ಆ ಮೂಲಕ ಸಂವಿಧಾನಬದ್ಧವಾದ ಮೀಸಲಾತಿಯನ್ನು ಕನ್ನಡ ನೆಲದಲ್ಲಿ ಜಾರಿ ಮಾಡಿದರು ಎಂದು ಸ್ಮರಿಸಿದರು.

RELATED ARTICLES

Related Articles

TRENDING ARTICLES