Monday, December 23, 2024

ಕಾಂಗ್ರೆಸ್ಸಿಗರಿಗೆ ದೇವರು ಒಳ್ಳೆಯದು ಮಾಡಲಿ : ಬಾಲಚಂದ್ರ ಜಾರಕಿಹೊಳಿ

ಬೆಳಗಾವಿ : ಕಾಂಗ್ರೆಸ್​ನವರಿಗೆ ದೇವರು ಒಳ್ಳೆಯದು ಮಾಡಲಿ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಕುಟುಕಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಯಾವ ಬಿಜೆಪಿ ಶಾಸಕರೂ ಬಿಜೆಪಿ ಬಿಟ್ಟು ಹೋಗುವುದಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ಆಪರೇಶನ್ ಹಸ್ತದ ಅವಶ್ಯಕತೆಯೇ ಇಲ್ಲ. ಸುಮ್ಮನೇ ಅವರ ಪಕ್ಷದ ಶಾಸಕರನ್ನು ಹೆದರಿಸಲು ಈ ರೀತಿ ಮಾಡುತ್ತಿದ್ದಾರೆ ಎಂದು ಕಿಡಿಕಾರಿಸಿದ್ದಾರೆ.

ಕಾಂಗ್ರೆಸ್ ಪಕ್ಷಕ್ಕೆ ಜನ ಸ್ಪಷ್ಟ ಬಹುಮತ ಕೊಟ್ಟಿದ್ದಾರೆ. ಅವರು ಒಳ್ಳೆಯ ರೀತಿ ಸರ್ಕಾರ ನಡೆಸಲಿ. ಅವರಿಗೆ ತೊಂದರೆ ಕೊಟ್ಟು ನಾವ್ಯಾಕೆ ಕೆಟ್ಟು ಹೆಸರು ತಗೋಬೇಕು? ವಿರೋಧ ಪಕ್ಷದಲ್ಲಿ ಕುಳಿತು ಕೆಲಸ ಮಾಡುವಂತೆ ಜನ ನಮಗೆ ಹೇಳಿದ್ದಾರೆ. ಕೊಟ್ಟ ಭರವಸೆಗಳನ್ನು ಅವರು ಈಡೇರಿಸುವ ಕೆಲಸ ಮಾಡಲಿ ಎಂದು ಚಾಟಿ ಬೀಸಿದ್ದಾರೆ.

ಇದನ್ನೂ ಓದಿ : ನವರಂಗಿ ಆಟ ಆಡ್ತಾ ಇರೋದು ಡಿಕೆಶಿ: ಸಿ.ಟಿ ರವಿ

ಯತ್ನಾಳ್ ಲೆಕ್ಕಾಚಾರ ನಮ್ಗೆ ಗೊತ್ತಿಲ್ಲ

ಆರು ತಿಂಗಳಲ್ಲಿ ಈ ಸರ್ಕಾರ ಪತನಗೊಳ್ಳುತ್ತೆ ಎಂಬ ಯತ್ನಾಳ್ ಹೇಳಿಕೆ ವಿಚಾರವಾಗಿ ಮಾತನಾಡಿ, ಅವರ ಲೆಕ್ಕಾಚಾರ ಏನಿದೆ ನಮಗೆ ಗೊತ್ತಿಲ್ಲ. ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲಿ. ಐದು ವರ್ಷಕ್ಕೆ ಈ ಎಲ್ಲ ಗ್ಯಾರಂಟಿ ಯೋಜನೆಗಳಿಗೆ 3 ಲಕ್ಷ ಕೋಟಿ ಬೇಕು. ಒಂದು ಬಜೆಟ್ ಹಣ ಗ್ಯಾರಂಟಿಗಳಿಗೆ ಬಳಸಬೇಕಾಗುತ್ತದೆ ಎಂದು ಹೇಳಿದ್ದಾರೆ.

RELATED ARTICLES

Related Articles

TRENDING ARTICLES