ಬೆಂಗಳೂರು : ಗೃಹಲಕ್ಷ್ಮಿ ಯೋಜನೆಯನ್ನು ಬೆಳಗಾವಿ ಬದಲು ಮೈಸೂರಿನಲ್ಲೇ ಉದ್ಘಾಟನೆ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸಿದ್ದತೆ ಮಾಡಿಕೊಂಡಿದ್ದು ಉದ್ಘಾಟನೆ ಕಾರ್ಯಕ್ರಮ ಶಿಫ್ಟ್ ಹಿಂದಿನ ರಾಜಕೀಯ ಲೆಕ್ಕಾಚಾರಗಳು ಗರಿಗೆದರಿದೆ.
2024ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಕನಿಷ್ಠ 20ಸ್ಥಾನ ಗೆಲ್ಲುವ ಗುರಿಯನ್ನು ಹೊಂದಿದ್ದು ಗೃಹಲಕ್ಷ್ಮೀ ಯೋಜನೆ ಉದ್ಘಾಟನೆ ಹೆಸರಿನಲ್ಲಿ ಮೈಸೂರು ಲೋಕಸಭಾ ಕ್ಷೇತ್ರವನ್ನು ‘ಕೈ’ವಶ ಮಾಡಿಕೊಳ್ಳಲು ಕಾಂಗ್ರೆಸ್ ಮುಖಂಡರು ತಯಾರಿ ನಡೆಸಿದ್ದಾರೆ.
ಇದನ್ನೂ ಓದಿ: ಎಸ್.ಟಿ ಸೋಮಶೇಖರ್ ಬೆಂಬಲಿಗರು ಕಾಂಗ್ರೆಸ್ ಸೇರ್ಪಡೆ: ಯಶವಂತಪುರದ ಜೆಡಿಎಸ್ ಕಾರಕರ್ತರ ಸಭೆ ಇಂದು
ವಿಧಾನಸಭಾ ಚುನಾವಣೆಯಲ್ಲಿ ಕ್ಷೇತ್ರ ತ್ಯಾಗ ಮಾಡಿದ ಪುತ್ರನ ರಾಜಕೀಯ ಭವಿಷ್ಯಕ್ಕಾಗಿ ಸಿಎಂ ಸಿದ್ದರಾಮಯ್ಯ ಗೃಹಲಕ್ಷ್ಮಿ ಯೋಜನೆ ಉದ್ಘಾಟನೆಯನ್ನು ಮೈಸೂರಿಗೆ ಶಿಫ್ಟ್ ಮಾಡಿ ಮುಂದಿನ ಲೋಕಸಭ ಕ್ಷೆತ್ರದಲ್ಲಿ ಪುತ್ರನಿಗೆ ಭದ್ರ ಬುನಾದಿ ಹಾಕತೊಡಗಿದ್ದಾರೆ ಎಂದು ಹೇಳಲಾಗುತ್ತಿದೆ.
ಹಾಲಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಸೋಲಿಗೆ ತೆರೆಮರೆಯಲ್ಲಿ ಸಾಧ್ಯವಾಗುವ ಎಲ್ಲಾ ಪ್ಲಾನ್ಗಳನ್ನು ಹಾಕಿರುವ ಕಾಂಗ್ರೆಸ್, ಸದಾ ಬೇಕಾಬಿಟ್ಟಿ ಟೀಕೆ ಮಾಡುವ ಸಂಸದ ಪ್ರತಾಪ್ ಸಿಂಹ ಗೆ ಸೋಲಿಸಲು ಕೈ ಪಡೆ ಸನ್ನದ್ದಾಗಿದೆ.
ಗ್ಯಾರಂಟಿ ಘೋಷಣೆಯಲ್ಲಿ ಒಂದಾಗಿರುವ ಗೃಹ ಲಕ್ಷ್ಮೀ ಯೋಜನೆಯನ್ನ ತವರಿನಲ್ಲಿ ಜಾರಿಗೊಳಿಸುವ ಮೂಲಕ ಸಿದ್ದು ಮತಭೇಟಿಗಿಳಿದಿದ್ದು ಈ ಯೋಜನೆ ಉದ್ಘಾಟನೆಗೆ ಹೈಕಮಾಂಡ್ ನಾಯಕರನ್ನು ಮೈಸೂರಿಗೆ ಕರೆಸಿ ತಮ್ಮ ವರ್ಚಸ್ಸನ್ನು ಮತ್ತಷ್ಟು ಹೆಚ್ಚಿಸಿಕೊಳ್ಳಲು ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.