Sunday, December 22, 2024

30,000 ಲಂಚ ಪಡೆಯುವಾಗ ಲೋಕಾ ಬಲೆಗೆ ಬಿದ್ದ ಉಪ ತಹಸೀಲ್ದಾರ್

ಶಿವಮೊಗ್ಗ : 30,000 ರೂಪಾಯಿ ಲಂಚ ಪಡೆಯುವಾಗ ಉಪ ತಹಶೀಲ್ದಾರ್ ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಹೊಳಲೂರಿನ ನಾಡ ಕಚೇರಿಯಲ್ಲಿ ಈ ಘಟನೆ ನಡೆದಿದೆ. ಪರಮೇಶ್ವರಪ್ಪ ಎಂಬುವವರೇ ಲಂಚ ಪಡೆಯುವ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿರುವ ಅಧಿಕಾರಿ.

ಉಪ ತಹಸೀಲ್ದಾರ್ ಪರಮೇಶ್ವರಪ್ಪ ಅವರು 40 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಮುಂಗಡವಾಗಿ 30 ಸಾವಿರ ರೂಪಾಯಿ ಲಂಚ ನೀಡುವಂತೆ ಸೂಚಿಸಿದ್ದರು. ಈ ಬಗ್ಗೆ ಲೋಕಾಯುಕ್ತಕ್ಕೆ ಮಾಹಿತಿ ನೀಡಲಾಗಿತ್ತು.

ಖಚಿತ ಮಾಹಿತಿ ಮೇರೆಗೆ ಲೋಕಾಯುಕ್ತ ಡಿವೈಎಸ್ಪಿ ಉಮೇಶ್ ಈಶ್ವರ್ ನಾಯ್ಕ ನೇತೃತ್ವದ ತಂಡ ದಾಳಿ ಮಾಡಿತ್ತು. ಈ ವೇಳೆ 30 ಸಾವಿರ ರೂಪಾಯಿ ಲಂಚ ಜೇಬಿಗಿಳಿಸುವಾಗ ಪರಮೇಶ್ವರಪ್ಪ ರೆಡ್​ ಹ್ಯಾಂಡ್​ ಆಗಿ ಸಿಕ್ಕಿಬಿದ್ದಿದ್ದಾರೆ.

RELATED ARTICLES

Related Articles

TRENDING ARTICLES