ಬೆಂಗಳೂರು : ಕೇಂದ್ರ ಬಿಜೆಪಿ ಸರ್ಕಾರ ರೈತರಿಗೆ ಸಿಹಿ ಸುದ್ದಿ ನೀಡಲು ಮುಂದಾಗಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM Kisan Samman Nidhi) ನಗದು ಸಹಾಯಧನವನ್ನು ಹೆಚ್ಚಿಸುವ ಬಗ್ಗೆ ಕೇಂದ್ರವು ಯೋಚಿಸುತ್ತಿದೆ ಎಂದು ತಿಳಿದುಬಂದಿದೆ.
ರೈತರಿಗೆ ವಾರ್ಷಿಕ 6 ಸಾವಿರ ರೂ. ನೆರವು ನೀಡಲಾಗುತ್ತಿದೆ. ಈ ಮೊತ್ತವನ್ನು ರೈತರ ಖಾತೆಗೆ ತಲಾ 2 ಸಾವಿರ ರೂ.ಗಳಂತೆ 3 ಕಂತುಗಳಲ್ಲಿ (ಜಮಾ) ವರ್ಗಾಯಿಸಲಾಗುತ್ತಿದೆ. ಈ ಹಣವನ್ನು ಶೇ.50ರಷ್ಟು ಹೆಚ್ಚಿಸಲು ಕೇಂದ್ರ ಮುಂದಾಗಿದೆ ಎಂದು ವರದಿಯಾಗಿದೆ.
ಸಹಾಯಧನ ಹೆಚ್ಚಳದ ಪ್ರಸ್ತಾವನೆಯು ಪ್ರಧಾನಿ ಕಾರ್ಯಾಲಯದ ಮುಂದೆ ಇವೆ ಎಂದು ಮಾಧ್ಯಮಗಳಲ್ಲಿ ವರದಿಯಾಗುತ್ತಿದೆ. ಇನ್ನೂ, ಕೇಂದ್ರ ಸರ್ಕಾರ ಪಿಎಂ ಕಿಸಾನ್ ಯೋಜನೆಯನ್ನು 2018ರ ಫೆಬ್ರವರಿ 1ರಂದು ಜಾರಿಗೆ ತಂದಿತ್ತು.