Monday, December 23, 2024

ನಾಳೆ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದೇನೆ : ಆಯನೂರು ಮಂಜುನಾಥ್

ಶಿವಮೊಗ್ಗ : ಕೆಲವು ದಿನಗಳಿಂದ ನನ್ನ ಬಗ್ಗೆ ರಾಜಕೀಯ ಕೇಂದ್ರಿತ ಸುದ್ದಿಗಳು ಹರಿದಾಡಿವೆ. ಎಲ್ಲರ ನಿರೀಕ್ಷೆಯಂತೆ ನಾಳೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದೇನೆ ಎಂದು ಮಾಜಿ ಸಂಸದ ಆಯನೂರು ಮಂಜುನಾಥ್ ಹೇಳಿದರು.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿದ್ದೇನೆ. ನಾನು ನನ್ನ ಸ್ನೇಹಿತರ ಜೊತೆ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದೇನೆ ಎಂದರು.

ನಾಳೆ ಬೆಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದೇನೆ. ವಿಧಾನಸಭಾ ಚುನಾವಣೆ ವೇಳೆಯೇ ಕಾಂಗ್ರೆಸ್ ಸೇರಬೇಕಿತ್ತು. ಆಗ ಜೆಡಿಎಸ್ ನಿಂದ ನಾನು ಸ್ಪರ್ಧೆಗಿಳಿಯಬೇಕಾಯ್ತು. ಮುಂಬರುವ ಚುನಾವಣೆಯಲ್ಲಿ ಸಮಯ, ಶಕ್ತಿ ನೀಡಿ ದುಡಿಯುವ ನಿಲುವನ್ನು ಹೊಂದಿದ್ದೇನೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತೇನೆ ಎಂದು ತಿಳಿಸಿದರು.

ಶೇ.99ರಷ್ಟು ಜನರು ನನ್ನನ್ನು ಒಪ್ಪಿದ್ದಾರೆ

ಆಗ ಅನಿವಾರ್ಯವಾಗಿ ಜೆಡಿಎಸ್ ಸೇರ್ಪಡೆಗೊಂಡಿದ್ದೆ. ಇದು ನನ್ನ ಕೊನೆಯ ಬಸ್ ಸ್ಟಾಪ್ ಆಗಿದೆ. ಆತಂಕಕ್ಕೆ ಒಳಗಾಗಿರುವ ಕೆಲ ನಾಲ್ಕು ಜನರು ನನಗೆ ವಿರೋಧಿಸುತ್ತಿದ್ದಾರೆ. ಕೆಲವರ ವಿರೋಧ ಇದ್ದರೂ ಶೇ.99ರಷ್ಟು ಜನರು ನನ್ನನ್ನು ಒಪ್ಪಿದ್ದಾರೆ. ನಿರಾಶೆಯಾದವರು ಯಾಕೋ ಆತಂಕಕ್ಕೊಳಗಾಗಿದ್ದಾರೆ. ವಿರೋಧ ಮಾಡುವವರಿಗೆ ನಾನು ಅಡ್ಡಿಯಾಗಲ್ಲ ಎಂದರು.

RELATED ARTICLES

Related Articles

TRENDING ARTICLES