Friday, December 27, 2024

ದೇವೇಗೌಡರ ಕುಟುಂಬವನ್ನು ಖರೀದಿಸುವ ಶಕ್ತಿ ಡಿಕೆಶಿ ಗೆ ಇಲ್ಲ: ಹೆಚ್​ಡಿಕೆ

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ದೇವೇಗೌಡರ ಕುಟುಂಬವನ್ನು ಬಿಟ್ಟು ಯಾರನ್ನು ಬೇಕಾದರೂ ಖರೀದಿ ಮಾಡುವ ಶಕ್ತಿ ಇದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು.

ಯಶವಂತಪುರದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಭಾಗಹಿಸುವುದಕ್ಕೆ ಮುನ್ನ ಮಾಧ್ಯಮಗಳ ಜತೆ ಮಾತನಾಡಿದರು ಅವರು. ಈ ಸಂದರ್ಭದಲ್ಲಿ ಅವರು ಡಿ.ಕೆ.ಶಿವಕುಮಾರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ಚುನಾವಣಾ ಪ್ರಚಾರದ ರಾಯಭಾರಿಯಾದ ಕ್ರಿಕೆಟ್​ ದಿಗ್ಗಜ ಸಚಿನ್​ ತೆಂಡುಲ್ಕರ್​

ತಮ್ಮ ವಿರುದ್ಧ ದಾಖಲೆ ಬಿಡುಗಡೆ ಮಾಡಿದರೆ ಭಯ ಇಲ್ಲ ಎಂದು ಭಂಡತನದ ಹೇಳಿಕೆ ನೀಡಿದ ಡಿ.ಕೆ.ಶಿವಕುಮಾರ್ ಅವರ ಹೇಳಿಕೆಯ ಬಗ್ಗೆ ಖಾರವಾಗಿ ಪ್ರತಿಕ್ರಿಯಿಸಿದ ಮಾಜಿ ಮುಖ್ಯಮಂತ್ರಿ ಅವರು; ” ಅವರು ಯಾರಿಗೂ ಹೆದರಲ್ಲ. ಅವರು ಯಾರನ್ನು ಬೇಕಾದರೂ ಖರೀದಿ ಮಾಡುತ್ತಾರೆ. ಬಿಜೆಪಿಯ ದೆಹಲಿಯ ನಾಯಕರನ್ನೇ ಖರೀದಿ ಮಾಡಿದ್ದರೂ ಅಚ್ಚರಿ ಇಲ್ಲ. ಯಾರನ್ನು ಬೇಕಾದರೂ  ಅವರು ಖರೀದಿ ಮಾಡಬಹುದು, ಅವರಿಗೆ ಆ ಶಕ್ತಿ ಇದೆ ಎಂದು ಮಾರ್ಮಿಕವಾಗಿ ಹೇಳಿದರು.

ಬಿಚ್ಚೊದು ಬಿಚ್ಚೊದು ಎಂದು ಅವರು ಪದೇಪದೆ ಹೇಳುತ್ತಿದ್ದಾರೆ. ಹೊರಗೆ ಬರಬೇಕಾದದ್ದು ಬಂದೇ ಬರುತ್ತದೆ. ಈವರೆಗೂ ಮಾಡಿಕೊಂಡಿದ್ದು ಸಾಕು. ಇನ್ನಾದರೂ ಲೂಟಿ ಹೊಡೆಯೊದು ನಿಲ್ಲಿಸಿ, ಅಣ್ಣ ಅಂತಿರಲ್ಲ. ಅಣ್ಣನಾಗಿ ಹೇಳುತ್ತೇನೆ. ಇನ್ನಾದರೂ ಈ ಲೂಟಿ ನಿಲ್ಲಿಸಿ. ಈ ಕಿವಿಮಾತು ಕೇಳಿದರೆ ನಿಮ್ಮನ್ನು ತಮ್ಮ ಎಂದು ಒಪ್ಪಿಕೊಳ್ಳುತ್ತೇನೆ ಎಂದು ಡಿಸಿಎಂ ಡಿಕೆಶಿ ಅವರ ವಿರುದ್ಧ ಕುಮಾರಸ್ವಾಮಿ ಅವರು ವಾಗ್ದಾಳಿ ನಡೆಸಿದರು.

RELATED ARTICLES

Related Articles

TRENDING ARTICLES