Wednesday, January 22, 2025

ವಾಹನಗಳಿಗೆ ಹೈಸೆಕ್ಯುರಿಟಿ ನಂಬರ್ ಪ್ಲೇಟ್‌ಗಳ ಅಳವಡಿಕೆ ಕಡ್ಡಾಯ

ಬೆಂಗಳೂರು : ವಾಹನಗಳಿಗೆ ಏಕರೂಪ ನೋಂದಣಿ ಸಂಖ್ಯೆ ಫಲಕ ಅಳವಡಿಕೆ ಕುರಿತಂತೆ ಸಾರಿಗೆ ಇಲಾಖೆ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, 2019ರ ಏಪ್ರಿಲ್ 1ಕ್ಕಿಂತ ಹಿಂದೆ ನೋಂದಣಿಯಾದ  ವಾಹನಗಳು ನವೆಂಬರ್ 17ರೊಳಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ಪ್ಲೇಟ್ (ಎಚ್‌ ಎಸ್‌ಆರ್‌ಪಿ) ಅಳವಡಿಸಿಕೊಳ್ಳುವಂತೆ ಆದೇಶಿಸಿದೆ.

ಇದನ್ನೂ ಓದಿ: ಚುನಾವಣಾ ಪ್ರಚಾರದ ರಾಯಭಾರಿಯಾದ ಕ್ರಿಕೆಟ್​ ದಿಗ್ಗಜ ಸಚಿನ್​ ತೆಂಡುಲ್ಕರ್​

ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ 2019ರ ಏಪ್ರಿಲ್ 1ಕ್ಕಿಂತ ಹಿಂದೆ ನೋಂದಣಿಯಾದ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಅಳವಡಿಕೆ ಕಡ್ಡಾಯವಾಗಿದೆ. ಅದರ ಅನುಷ್ಠಾನವನ್ನು ಈವರೆಗೆ ಮಾಡಿರದ ಸಾರಿಗೆ ಇಲಾಖೆ, ಇದೀಗ ಆ ಕುರಿತು ಆದೇಶ ಹೊರಡಿಸಿದೆ.

ಒಂದು ವೇಳೆ ನಿಗದಿತ ಅವಧಿಯೊಳಗೆ ಎಚ್‌ಎಸ್‌ಆರ್‌ಪಿ ಅಳವಡಿಸಿಕೊಳ್ಳದಿದ್ದರೆ ವಾಹನಗಳಿಗೆ 500 ರಿಂದ 1 ಸಾವಿರ ರು. ದಂಡ ವಿಧಿಸುವುದಾಗಿಯೂ ಎಚ್ಚರಿಕೆ ನೀಡಲಾಗಿದೆ.

RELATED ARTICLES

Related Articles

TRENDING ARTICLES