Friday, November 22, 2024

ಜೆಡಿಎಸ್ ಶಾಸಕರು ಯಾರು ಪಕ್ಷ ಬಿಡಲ್ಲ: ಹೆಚ್​.ಡಿ. ಕುಮಾರಸ್ವಾಮಿ

ಬೆಂಗಳೂರು : ನಮ್ಮ ಜೆಡಿಎಸ್​ ಶಾಸಕರು ಪಕ್ಷ ಬಿಡುವ ಸಾಧ್ಯತೆ ಇಲ್ಲ. ಕಾಂಗ್ರೆಸ್ ನವರು ಯಾಕೆ ಈ ರೀತಿಯ ಚರ್ಚೆ ಹುಟ್ಟುಹಾಕಿದ್ದಾರೆ ಎಂದರೇ ಅವರದೇ ಪಕ್ಷದ 30 ಶಾಸಕರು ಪಕ್ಷ ಬಿಡಲು ಮುಂದಾಗಿದ್ದಾರೆ ಎಂದು ಡಿಕೆಶಿಗೆ ಟಾಂಗ್​ ನೀಡಿದರು.

ನಗರದಲ್ಲಿ ಜೆಡಿಎಸ್ ಪಕ್ಷದ ಸಭೆಯಲ್ಲಿ ಮಾತನಾಡಿದರು. ಕಾಂಗ್ರೆಸ್ ಪಕ್ಷ ಜೆಡಿಎಸ್ ಪಕ್ಷದ ಶಾಸಕರನ್ನು ಸೆಳೆಯುತ್ತಿದೆಯಲ್ಲ ಎನ್ನುವ ಪ್ರಶ್ನೆಗೆ ಖಾರವಾಗಿ ಉತ್ತರಿಸಿದ ಅವರು, ನಮ್ಮ ಶಾಸಕರು ಪಕ್ಷ ಬಿಡುವ ಸಾಧ್ಯತೆ ಇಲ್ಲ. ಕಾಂಗ್ರೆಸ್ ನವರು ಯಾಕೆ ಈ ರೀತಿಯ ಚರ್ಚೆ ಹುಟ್ಟುಹಾಕಿದ್ದಾರೆ ಎಂದರೇ ಅವರದೇ ಪಕ್ಷದ 30 ಶಾಸಕರು ಪಕ್ಷ ಬಿಡಲು ಮುಂದಾಗಿದ್ದಾರೆ. ಅದನ್ನು ಸರಿ ಮಾಡಿಕೊಳ್ಳಲು ಸಾಧ್ಯ ಅಗದ ಕಾಂಗ್ರೆಸ್ ನವರು ಬೇರೆ ಪಕ್ಷಗಳ ಶಾಸಕರು ಬರುತ್ತಿದ್ದಾರೆ ಎಂದು ಗುಲ್ಲು ಹಬ್ಬಿಸುತ್ತಿದ್ದಾರೆ. ಕಾಂಗ್ರೆಸ್ ಶಾಸಕರು ಪಕ್ಷ ಬಿಡುವುದನ್ನ ತಡೆಯಲು ಈ ಗುಮ್ಮ ಬಿಟ್ಟುಕೊಂಡು ತಿರುಗಾಡುತ್ತಿದ್ದಾರೆ ಎಂದು ತಿರುಗೇಟು ಕೊಟ್ಟರು.

ಇದನ್ನೂ ಓದಿ: ದೇವೇಗೌಡರ ಕುಟುಂಬವನ್ನು ಖರೀದಿಸುವ ಶಕ್ತಿ ಡಿಕೆಶಿ ಗೆ ಇಲ್ಲ: ಹೆಚ್​ಡಿಕೆ

ಇಂಥ ವಾತಾವರಣದಲ್ಲಿ ಮೊದಲನೇ ಘರ್ ವಾಪಸ್ಸಿ ಮಾಡಿಕೊಂಡಿದ್ದಾರೆ. ಆದರೆ, ನಾನು ಹೋಗಲ್ಲ ಎಂದ ಸೋಮಶೇಖರ್ ಹೇಳುತ್ತಿದ್ದಾರೆ. ಅವರು ಮೈಸೂರು ಉಸ್ತುವಾರಿ ಸಚಿವರಾಗಿದ್ದರು. ಮಂತ್ರಿಯಾಗಿ ಅವರು  ಕೇಳಿದ್ದಕ್ಕೆಲ್ಲಾ ಸಹಿ ಹಾಕಿದ್ದರು ಅಲ್ಲವೇ? ಅಭಿವೃದ್ಧಿಗಾಗಿ ಕಾಂಗ್ರೆಸ್ ಗೆ ಹೋಗ್ತಾ ಇದ್ದೀನಿ ಅಂತ ಹೇಳ್ತಾ ಇದ್ದಾರೆ. ಹಾಗಾದರೆ ಇವರು ಸಂಪೂರ್ಣವಾಗಿ ಅಭಿವೃದ್ಧಿ ಕೆಲಸ ಮಾಡಿಲ್ಲ ಅಂತ ಆಯ್ತು ಅಲ್ಲವೇ? ಮೂರು ವರ್ಷಗಳಿಂದ‌ ಈ ಕ್ಷೇತ್ರಕ್ಕೆ ಅವರು ಏನು ಮಾಡಿದರು? ಕ್ಷೇತ್ರದ ಅಭಿವೃದ್ಧಿ ಮಾಡಿಲ್ಲ ಅಲ್ಲವೇ? ಎಂದು ಮಾಜಿ ಮುಖ್ಯಮಂತ್ರಿ ಅವರು ಟಾಂಗ್ ಕೊಟ್ಟರು.

ಯಶವಂತಪುರ ವಿಧಾನಸಭೆ ಕ್ಷೇತ್ರಕ್ಕೆ ಹಣ ಬಿಡುಗಡೆ ವಿಚಾರದ ಬಗ್ಗೆ ಗಮನ ಸೆಳೆದಾಗ ಅವರು ಹೇಳಿದ್ದಿಷ್ಟು; ಹಿಂದೆ ಬಿಡುಗಡೆ ಆಗಿದ್ದ ಹಣ ಏನಾಯಿತು? ಅದನ್ನು ರೈಲಿಗೆ ತೆಗೆದುಕೊಂಡು ಹೋದರು?  ರಸ್ತೆ ಮಾಡದೆಯೇ ಬಿಲ್ ಮಾಡಿಕೊಂಡಿದ್ದಾರೆ ಎಂದು ಜನರು ಹೇಳುತ್ತಿದ್ದಾರೆ. ಡಿಸಿಎಂ ನೋಡಿದರೆ ಈಗ ತನಿಖೆ ಮಾಡ್ತಾ ಇದ್ದಾರೆ. ಕಳ್ಳ ಬಿಲ್ ಮಾಡಿಕೊಂಡಿರೋರನ್ನು ಕರೆದುಕೊಂಡು ಹೋಗಿ ಎನು ಮಾಡ್ತೀರಾ? ನಾನು ಈ ಬಗ್ಗೆ ಸಿಎಂ, ಡಿಸಿಎಂ ಅವರನ್ನು ಪ್ರಶ್ನೆ ಮಾಡಲು ಬಯಸುತ್ತೇನೆ ಎಂದು ಅವರು ಹೇಳಿದರು.

ಈ ವೇಳೆ ಪಕ್ಷದ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ, ಕ್ಷೇತ್ರದ ಜೆಡಿಎಸ್ ಘಟಕದ ಅಧ್ಯಕ್ಷ ಜವರಾಯಿಗೌಡ, ಪಕ್ಷದ ರಾಜ್ಯ ಕಾನೂನು ಘಟಕದ ಅಧ್ಯಕ್ಷ ಎ.ಪಿ.ರಂಗನಾಥ್ ಸೇರಿದಂತೆ ಕ್ಷೇತ್ರದ ಅನೇಕ ನಾಯಕರು ಹಾಜರಿದ್ದರು.

RELATED ARTICLES

Related Articles

TRENDING ARTICLES