ಬೆಂಗಳೂರು : ಸಭೆ ನಡೆಸದೇ ತಮಿಳುನಾಡಿಗೆ ಏಕಾಏಕಿ ನೀರು ಬಿಟ್ಟಿರುವ ಕಾಂಗ್ರೆಸ್ ಸರ್ಕಾರದ ನಡೆ ವಿರುದ್ಧ ಮಾಜಿ ಸಿಎಂ ಡಾ.ಬಿ.ಎಸ್ ಯಡಿಯೂರಪ್ಪ ಗುಡುಗಿದ್ದಾರೆ.
ತಮಿಳುನಾಡಿಗೆ ಕಾವೇರಿ ನೀರು ಹರಿಸಿದ ಹಿನ್ನೆಲೆ ಸುಪ್ರೀಂಕೋರ್ಟ್ ಹಾಗೂ ಕೇಂದ್ರದ ಜಲ ಆಯೋಗದ ಅನ್ವಯ ಕ್ರಮ ಕೈಗೊಳ್ಳಲಾಗಿದೆ. ಈ ಸಂಬಂಧ ಇಂದು ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದ ಸರ್ವಪಕ್ಷಗಳ ಸಭೆ ನಡೆಯಿತು. ಈ ಸಭೆಯಲ್ಲಿ ಯಡಿಯೂರಪ್ಪ ಅವರು ಸರ್ಕಾರದ ನಡೆ ವಿರುದ್ಧ ಆಕ್ರೋಶಗೊಂಡಿದ್ದಾರೆ.
ಈ ಸಭೆಯನ್ನು ತಮಿಳುನಾಡಿಗೆ ನೀರು ಬಿಡುವ ಮುನ್ನವೇ ಕರಿಯಬೇಕಿತ್ತು. ಆದರೆ, ನೀರು ಬಿಟ್ಟ ಮೇಲೆ ಈ ಸಭೆಯನ್ನು ಕರಿದಿದ್ದೀರಿ. ಅಷ್ಟೇ ಅಲ್ಲ ರಾಜ್ಯದಲ್ಲಿ ಮುಂಗಾರು ಅವಧಿ ಮುಗಿಯುತ್ತಿದ್ದು, ನಮ್ಮಲ್ಲಿ ಮಳೆ ಕೊರತೆಯಿಂದ ನೀರಿನ ಮಟ್ಟ ಕೂಡ ಕಡಿಮೆ ಇದೆ. ತಮಿಳುನಾಡಿನಲ್ಲಿ ಮುಂಗಾರು ಅವಧಿ ಇನ್ನೂ ಇದೆ. ಆದರೂ ಅವರಿಗೆ ನೀರು ಬಿಟ್ಟಿದ್ದೀರಾ ಎಂದು ತರಾಟೆ ತೆಗೆದುಕೊಂಡಿದ್ದಾರೆ.
ಇದನ್ನು ಓದಿ : ಮೋದಿ ಮತ್ತೆ ಪ್ರಧಾನಿ ಆಗಲ್ಲ.. ಬಿಜೆಪಿ ಬರಲ್ಲ : ಬಿಜೆಪಿ ಸಂಸದರ ಎಡವಟ್ಟು
ಸುಪ್ರೀಂಕೋರ್ಟ್ ಹಾಗೂ ಪ್ರಾಧಿಕಾರದ ಮುಂದೆ ಸರಿಯಾದ ವಾದವನ್ನು ಮಂಡಿಸಬೇಕಿತ್ತು. ಆಗ ಈ ಪರಿಸ್ಥಿತಿ ಬರುತ್ತಿರಲಿಲ್ಲ. ಕೋರ್ಟ್ ಮುಂದೆ ಇಗಲಾದರೂ ಎಲ್ಲ ವಿಚಾರ ತಿಳಿಸಿ ಎಂದು ಸರ್ಕಾರಕ್ಕೆ ಯಡಿಯೂರಪ್ಪ ಸಲಹೆ ನೀಡಿದ್ದಾರೆ. ಬಿಎಸ್ವೈ ಮಾತಿಗೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೂಡ ಧ್ವನಿಗೂಡಿಸಿದ್ದಾರೆ.