Wednesday, January 22, 2025

ಹೃದಯಾಘಾತದಿಂದ ಪೋಲಿಸ್ ಕಾನ್ಸಟೇಬಲ್ ಸಾವು

ಯಾದಗಿರಿ : ಅನಾರೋಗ್ಯದಿಂದ ಬಳಲುತ್ತಿದ್ದ ಪೋಲಿಸ್ ಕಾನ್ಸಟೇಬಲ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಘಟನೆ ಬೆಂಗಳೂರಿನ ಆಸ್ಪತ್ರೆಯಲ್ಲಿ ನಡೆದಿದೆ.

ಶಹಾಪುರ ತಾಲೂಕಿನ ಗೋಗಿ ಠಾಣೆಯ ಕಾನ್ಸಟೇಬಲ್ ಹುದ್ದೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ದೇವಿಂದ್ರಪ್ಪ (40) ಎಂಬಾತ ಮೃತ ದುರ್ದೈವಿ. ಕಳೆದ ಮೂರು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಹಿನ್ನೆಲೆ ಜೂನ್​ ತಿಂಗಳಿನಿಂದ ರಜೆ ತೆಗೆದುಕೊಂಡಿದ್ದರು. ಬಳಿಕ ನಿನ್ನೆ ತೀರ್ವ ಜ್ವರದಿಂದ ಬಳಲುತ್ತಿದ್ದು, ಚಿಕಿತ್ಸೆಗಾಗಿ ಬೆಂಗಳೂರಿಗೆ ತೆರಳಿದ್ದರು.

ಇದನ್ನು ಓದಿ : ಸಾವಿನಲ್ಲೂ ಸಾರ್ಥಕತೆ ಮೆರೆದ ವಿದ್ಯಾರ್ಥಿ

ಈ ವೇಳೆ ಆಸ್ಪತ್ರೆಗೆ ತೋರಿಸಲೆಂದು ಹೋಗುತ್ತಿದ್ದ ಸಮಯದಲ್ಲಿ ಹೃದಯಾಘಾತ ಸಂಭವಿಸಿ ಕಾನ್ಸಟೇಬಲ್ ದೇವಿಂದ್ರಪ್ಪ ಮೃತಪಟ್ಟಿದ್ದಾರೆ. ಕಳೆದ 16 ವರ್ಷದಿಂದ ಪೋಲಿಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದವರು ಇಂದು ವಿಧಿಯಾಟಕ್ಕೆ ಬಲಿಯಾಗಿದ್ದಾರೆ.

RELATED ARTICLES

Related Articles

TRENDING ARTICLES