Monday, December 23, 2024

ಗುಡ್ ನ್ಯೂಸ್ : ಅರಸಾಳು ನಿಲ್ದಾಣದಲ್ಲಿ ಎಕ್ಸ್​ಪ್ರೆಸ್ ರೈಲುಗಳು ನಿಲುಗಡೆ

ಶಿವಮೊಗ್ಗ : ಸ್ವಾತಂತ್ರ್ಯ ಪೂರ್ವದಲ್ಲಿ (1935) ನಿರ್ಮಾಣಗೊಂಡಿರುವ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸಮೀಪದ ಅರಸಾಳು ರೈಲ್ವೆ ನಿಲ್ದಾಣದಲ್ಲಿ ಇಂದಿನಿಂದ ಎಕ್ಸ್ ಪ್ರೆಸ್ ರೈಲುಗಳು ನಿಲ್ಲುಗಡೆ ಆಗುತ್ತಿವೆ. 

ಹೊಸನಗರ, ರಿಪ್ಪನಪೇಟೆ, ಹುಂಚ, ಕೋಣಂದೂರು, ನಿಟ್ಟೂರು, ಯಡೂರು, ಮಾಸ್ತಿ ಕಟ್ಟೆ, ರಾಮಚಂದ್ರಪುರ, ಹೊಂಬುಜ, ಕೋಡೂರು, ಸೂಡೂರು, ಚಿನ್ನ ಮನೆ, ನಗರ ರೋಡ್ ಹೀಗೆ ಸುತ್ತಮುತ್ತಲಿನ ಊರಿನ ಪ್ರಯಾಣಿಕರು ಅರಸಾಳು ರೈಲ್ವೆ ನಿಲ್ದಾಣ ಸಮೀಪವಿದ್ದರು, ರೈಲಿಗಾಗಿ ಆನಂದಪುರ ಹೋಗುವ ಅನಿವಾರ್ಯತೆ ಇತ್ತು.

ಸಾರ್ವಜನಿಕರ ಹಾಗೂ ಪ್ರಯಾಣಿಕರ ಬಹು ವರ್ಷಗಳಿಂದ ಅರಸಾಳು-ಮಾಲ್ಗುಡಿ ರೈಲ್ವೆ ನಿಲ್ದಾಣದಲ್ಲಿ ರೈಲು ನಿಲುಗಡೆ ಮಾಡುವಂತೆ ಅನೇಕ ಬಾರಿ ರಿಪ್ಪನ್ ಪೇಟೆ,ಅರಸಾಳು ಗ್ರಾಮದ ನಾಗರಿಕರು ಹಲವಾರು ಬಾರಿ ಮನವಿ ಸಲ್ಲಿಸಿದ್ದರು.

ಸಂಸದರ ವಿಶೇಷ ಪ್ರಯತ್ನದಿಂದ ಇಂದಿನಿಂದ ಪ್ರತಿದಿನ ನಾಲ್ಕು ಮುಖ್ಯ ರೈಲುಗಳು ಈ ನಿಲ್ದಾಣದಲ್ಲಿ ನಿಲ್ಲಲಿದೆ. ಇದರೊಂದಿಗೆ, ಶಿವಮೊಗ್ಗದ ಕುಂಸಿ ನಿಲ್ದಾಣದಲ್ಲೂ ಈ ರೈಲುಗಳು ನಿಲ್ಲಲಿವೆ. ಇಂದು ಬೆಳಿಗ್ಗೆ ರಿಪ್ಪನಪೇಟೆ, ಅರಸಾಳು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ರೈಲಿಗೆ ಪೂಜೆಯನ್ನು ಸಲ್ಲಿಸಿ, ಸಂತಸ ವ್ಯಕ್ತಪಡಿಸಿದರು.

RELATED ARTICLES

Related Articles

TRENDING ARTICLES