ಬೆಂಗಳೂರು : ಆಗಸ್ಟ್ 23 ನ್ನು ಇನ್ನು ಮುಂದೆ ರಾಷ್ಟ್ರೀಯ ಬಾಹ್ಯಾಕಾಶ ದಿನವೆಂದು ಆಚರಣೆ ಮಾಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಬೆಂಗಳೂರಿನ ಪೀಣ್ಯ ಬಳಿ ಇರುವ ಇಸ್ರೋ ನಿಯಂತ್ರಣ ಕೇಂದ್ರದಲ್ಲಿ ವಿಜ್ಞಾನಿಗಳ ಜೊತೆ ಸಂವಾದ ನಡೆಸಯವ ವೇಳೆ ಈ ವಿಚಾರ ಪ್ರಸ್ತಾಪ ಮಾಡಿದ ಪ್ರಧಾನಿ ಮೋದಿ, ಇಸ್ರೋ ವಿಜ್ಞಾನಿಗಳು ವಿಕ್ರಮ್ ಲ್ಯಾಂಡರ್ನ ಸಾಫ್ಟ್ ಲ್ಯಾಂಡ್ ಮಾಡಿ ಯಶಸ್ವಿಯಾದ ಹಿನ್ನೆಲೆ ಇನ್ನು ಮುಂದೆ ಪ್ರತಿ ವರ್ಷ ಆಗಸ್ಟ್ 23 ರನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನವಾಗಿ ಆಚರಿಸಲಾಗುವುದು ಎಂದು ಅವರು ಘೋಷಣೆ ಮಾಡಿದರು.
ಚಂದ್ರಯಾನ-3 ಚಂದ್ರನ ದಕ್ಷಿಣ ಮೇಲ್ಮೈನಲ್ಲಿ ವಿಕ್ರಮ್ ಲ್ಯಾಂಡರ್ನ ಯಶ್ವಸಿಯಾಗಿ ಲ್ಯಾಂಡ್ ಮಾಡುವ ಮೂಲಕ ಇತಿಹಾಸ ಸೃಷ್ಟಿಸಿ ಜಗತ್ತೆ ಭಾರತದತ್ತ ತಿರುಗಿನೋಡುವಂತಾಗಿದೆ. ಈ ಯಶಸ್ಸನ್ನು ಅಮರವಾಗಿಸಲು ಆ.23 ನ್ನು ಇನ್ಮುಂದೆ ರಾಷ್ಟ್ರೀಯ ಬಾಹ್ಯಾಕಾಶ ದಿನವಾಗಿ ಆಚರಣೆ ಮಾಡಲಾಗುವುದು ಎಂದರು.