Wednesday, January 22, 2025

ಇನ್ನೊಂದು ವಾರ ರಾಜಕಾರಣದ ಬಗ್ಗೆ ಮಾತನಾಡುವುದಿಲ್ಲ: ಎಚ್.ಡಿ.ಕುಮಾರಸ್ವಾಮಿ

ಹಾಸನ: ಇನ್ನೊಂದು ವಾರ ರಾಜಕಾರಣದ ಬಗ್ಗೆ ಮಾತನಾಡುವುದಿಲ್ಲ. ಕಾರಣ, ನಾವೆಲ್ಲರೂ ಈಗ ಚಂದ್ರಯಾನ ಯಶಸ್ಸಿನ ಗುಂಗಿನಲ್ಲೇ ಇದ್ದೇವೆ. ಇವತ್ತು ದೇಶ-ವಿದೇಶಗಳಲ್ಲಿ ಚಂದ್ರಯಾನದ ಬಗ್ಗೆಯೇ ದೊಡ್ಡಮಟ್ಟದ ಚರ್ಚೆಗಳು ನಡೆಯುತ್ತಿವೆ, ಪ್ರಶಂಸೆಗಳು ಬರುತ್ತಿವೆ. ಎಲ್ಲರ ಗಮನ ಆ ಕಡೆಯೇ ಇದೆ. ಹೀಗಾಗಿ ನಾನು ಒಂದು ವಾರ ರಾಜಕಾರಣದ ಬಗ್ಗೆ ಮಾತನಾಡದಿರಲು ನಿರ್ಧರಿಸಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲು ಹಾಸನಕ್ಕೆ ಇಂದು ಭೇಟಿ ನೀಡಿದ್ದ ವೇಳೆ ಅವರು ಮಾಧ್ಯಮಗಳ ಜತೆ ಮಾತನಾಡಿದರು. ವಿಜ್ಞಾನಿಗಳ ಅವಿರತ ಶ್ರಮದಿಂದ ದೇಶದ ಪ್ರತಿಷ್ಠೆಯನ್ನು ವಿಶ್ವಮಟ್ಟದಲ್ಲಿ ಹೆಚ್ಚಿಸಿದ್ದಾರೆ. ಇವತ್ತು ಪ್ರಧಾನಮಂತ್ರಿಗಳು ಬೆಂಗಳೂರಿಗೆ ಆಗಮಿಸಿ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಿ ಹೋಗಿದ್ದಾರೆ. ಹೀಗಾಗಿ ರಾಜಕಾರಣ ಬಗ್ಗೆ ಹೆಚ್ಚಿಗೆ ಚರ್ಚೆ ಮಾಡಲು ಹೋಗಲ್ಲ.

ಇದನ್ನು ಓದಿ: ಮೋದಿ ವೀಕ್ಷಣೆಗೆ ಜನಸಾಮಾನ್ಯರಂತೆ ರಸ್ತೆಪಕ್ಕದಲ್ಲಿ ನಿಂತ ರಾಜ್ಯ ಬಿಜೆಪಿ ನಾಯಕರು!

ನೀವು ಸರಕಾರದ ಬಗ್ಗೆ ಕಠಿಣವಾಗಿ ಮಾತನಾಡುವುದು ಬೇಡ, ಇವರು ತಪ್ಪುಗಳನ್ನು ಮಾಡಿಕೊಂಡು ಹೋಗಲಿ ಬಿಟ್ಟು ಬಿಡಿ ಎಂದು ಬಹಳಷ್ಟು ಜನ ಹೇಳುತ್ತಿದ್ದಾರೆ. ಹಾಗಂತ ಬಿಟ್ಟುಬಿಟ್ಟರೆ ಇವರಿಗೆ ಹೇಳೋರು ಕೇಳೋರು ಇರುವುದಿಲ್ಲ, ಆ ಪರಿಸ್ಥಿತಿಗೆ ಬಂದು ಬಿಡ್ತಾರೆ. ಈಗಲೇ ಹೇಳೋರು, ಕೇಳೋರು ಇಲ್ಲ ಎಂದು ಅವರು ಟೀಕಾ ಪ್ರಹಾರ ನಡೆಸಿದರು.

RELATED ARTICLES

Related Articles

TRENDING ARTICLES