Wednesday, January 22, 2025

ಬಿಜೆಪಿ ಸ್ಥಿತಿ ನೆನೆದು ಮರುಕ ವ್ಯಕ್ತಪಡಿಸಿದ ಜಗದೀಶ್ ಶೆಟ್ಟರ್

ಉಡುಪಿ : ಕರ್ನಾಟಕ ಬಿಜೆಪಿ ಲೀಡರ್ ಲೆಸ್ ಆಗಿದೆ. ಕರ್ನಾಟಕದಲ್ಲಿ ಬಿಜೆಪಿ ಇನ್ನೂ ದಯನೀಯ ಪರಿಸ್ಥಿತಿಗೆ ಹೋಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಬಿಜೆಪಿ ಸ್ಥಿತಿ ನೆನೆದು ಮರುಕ ವ್ಯಕ್ತಪಡಿಸಿದ್ದಾರೆ.

ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ರಾಜ್ಯಾಧ್ಯಕ್ಷರನ್ನು ಇನ್ನೂ ರಿಪ್ಲೇಸ್ ಮಾಡಲು ಸಾಧ್ಯವಾಗಿಲ್ಲ. ಬಿಜೆಪಿಗೆ ಒಬ್ಬ ನಾಯಕ ಎಂಬುದು ಇಲ್ಲ. ಬೇರೆ ಬೇರೆ ಕಡೆ ಕಾಂಗ್ರೆಸ್ ನಾಯಕರನ್ನು ಬಿಜೆಪಿಯವರು ಭೇಟಿಯಾಗುತ್ತಿದ್ದಾರೆ ಎಂದು ಕುಟುಕಿದ್ದಾರೆ.

ಬಿಜೆಪಿ ಒಳಗೆ ಸಾಕಷ್ಟು ಜನ ನೊಂದಿದ್ದಾರೆ, ಸಂಕಟಪಡುತ್ತಿದ್ದಾರೆ. ಬಿಜೆಪಿಯನ್ನು ಬಿಟ್ಟು ಹೊರಗೆ ಬರಲು ಬಹಳಷ್ಟು ಜನ ತಯಾರಾಗಿದ್ದಾರೆ. ಅಮಿತ್ ಶಾ, ಮತ್ತೊಬ್ಬರು ಯಾರು ಈವರೆಗೆ ಕರೆ ಮಾಡಿಲ್ಲ. ನನಗೆ ಬಿಜೆಪಿ ಹೈಕಮಾಂಡ್ ನಿಂದ ಯಾವುದೇ ಕರೆ ಬಂದಿಲ್ಲ. ಕರೆ ಬಾರದೆ ಈ ಎಲ್ಲಾ ಚರ್ಚೆಗಳು ಯಾಕೆ? ಕರೆ ಮಾಡಿದರೆ ನಾನು ಮಾಧ್ಯಮಗಳಿಗೆ ತಿಳಿಸುತ್ತೇನೆ. ಕರೆ ಬರುವ ಮೊದಲು ಯಾಕೆ ಚರ್ಚೆ ಮಾಡಬೇಕು ಎಂದು ಪ್ರಶ್ನಿಸಿದರು.

ನಾನು ಹೆಚ್ಚು ಕಮೆಂಟ್ ಮಾಡಲ್ಲ

ಪ್ರಧಾನಿ ಮೋದಿ ಬಂದಾಗ ಬಿಜೆಪಿ ನಾಯಕರು ಬ್ಯಾರಿಕೇಡ್ ಹೊರಗೆ ನಿಂತಿದ್ದ ಕುರಿತು ಮಾತನಾಡಿದ ಅವರು, ಬಿಜೆಪಿ ಒಳಗೆ ಏನಾಗುತ್ತದೆ ಅಂತ ನಾನು ಹೆಚ್ಚು ಕಮೆಂಟ್ ಮಾಡಲ್ಲ. ರಾಷ್ಟ್ರೀಯ ಪಕ್ಷಕ್ಕೆ ವಿಪಕ್ಷ ನಾಯಕನ ಆಯ್ಕೆ ಮಾಡಲು ಇನ್ನೂ ಸಾಧ್ಯ ಆಗಿಲ್ಲ. ಪ್ರಧಾನಿ ಬಂದಾಗ ರಾಜ್ಯ ಬಿಜೆಪಿ ನಾಯಕರನ್ನು ಭೇಟಿ ಆಗದೇ ಇರುವುದು ಮತ್ತೊಂದು ಶೋಚನೀಯ ವಿಚಾರ ಎಂದು ಛೇಡಿಸಿದ್ದಾರೆ.

ಬಿಜೆಪಿ ಶೋಚನೀಯ ಸ್ಥಿತಿಯಲ್ಲಿದೆ

ಬಿಜೆಪಿ ಬಹಳ ಶೋಚನೀಯ ಪರಿಸ್ಥಿತಿಯಲ್ಲಿದೆ. ಬಿಜೆಪಿ ರಾಜ್ಯದಲ್ಲಿ ಬಹಳ ದಯನೀಯ ಸ್ಥಿತಿಯಲ್ಲಿದೆ. ಮೊದಲು 120 ಸ್ಥಾನ ಗೆದ್ದಿದ್ದ ಬಿಜೆಪಿ ದಯಾನೀಯ ಸ್ಥಿತಿಗೆ ಬಂದು ನಿಂತಿದೆ. ಬಿಜೆಪಿಯಲ್ಲಿ ಮಿಸ್ ಹ್ಯಾಂಡಲಿಂಗ್ ಮತ್ತು ಮಿಸ್ ಮ್ಯಾನೇಜ್ಮೆಂಟ್ ಇದೆ. ನಮ್ಮಂತ ನಾಯಕರನ್ನೇ ಪಕ್ಷದಿಂದ ಹೊರಗೆ ಹಾಕಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

RELATED ARTICLES

Related Articles

TRENDING ARTICLES