Sunday, December 22, 2024

ಕಾಂಗ್ರೆಸ್​ ಸರ್ಕಾರಕ್ಕೆ 100 ದಿನಗಳ ಸಂಭ್ರಮ: ರಾಜ್ಯದ ಜನತೆಗೆ ಧನ್ಯವಾದ ತಿಳಿಸಿದ ಸಿಎಂ

ಬೆಂಗಳೂರು :  ರಾಜ್ಯದಲ್ಲಿ ಕಾಂಗ್ರೆಸ್​ ಸರ್ಕಾರ ಅಧಿಕಾರಕ್ಕೆ ಬಂದು ಇಂದಿಗೆ ನೂರು ದಿನಗಳು ಪೂರೈಸಿದ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಜನತೆಯನ್ನುದ್ದೇಶಿ ಟ್ವೀಟ್​ ಮಾಡುವ ಮೂಲಕ ಜನರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.

ತಮ್ಮ ಟ್ವೀಟ್​​​ನಲ್ಲಿ, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು ಇಂದಿಗೆ ” 100 ದಿನಗಳು” ಪೂರೈಸಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಾಡಿನ ಮತದಾರರು ನಮ್ಮ ಮೇಲೆ ನಂಬಿಕೆ ಮತ್ತು ಭರವಸೆಯನ್ನಿಟ್ಟು 135 ಸ್ಥಾನಗಳಲ್ಲಿ ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿ ಪೂರ್ಣ ಬಹುಮತದ ಸುಭದ್ರ ಸರ್ಕಾರ ರಚನೆಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಜನರು ನೀಡಿರುವ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು, ಅವರ ನಿರೀಕ್ಷೆಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತಿದ್ದೇವೆ.

ಇದನ್ನು ಓದಿ: ಆರೈಕೆ ಸರಿಯಾಗಿ ಮಾಡು ಎಂದಿದ್ದಕ್ಕೆ ಶರ್ಟ್​ ಬಿಚ್ಚಿ ಅನುಚಿತ ವರ್ತನೆ ತೋರಿದ ವೈದ್ಯ!

ಗ್ಯಾರಂಟಿ ಮತ್ತು ಅಭಿವೃದ್ಧಿ ಯೋಜನೆಗಳ ಅನುಷ್ಠಾನದ ಜೊತೆಜೊತೆಗೆ ಬುದ್ಧ, ಬಸವ, ಅಂಬೇಡ್ಕರ್, ಕುವೆಂಪು, ಕನಕದಾಸರು, ನಾರಾಯಣ ಗುರು ಮುಂತಾದ ದಾರ್ಶನಿಕರು ತೋರಿದ ಸಮಾನತೆಯ ಹಾದಿಯಲ್ಲಿ ನಾಡನ್ನು ಮುನ್ನಡಿಸಿಕೊಂಡು ಹೋಗುತ್ತಿದ್ದೇವೆ. ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನು ಸರ್ಕಾರದ ಕಾರ್ಯಕ್ರಮಗಳ ಮೂಲಕ ತಲುಪಬೇಕೆಂಬ ಆಶಯದೊಂದಿಗೆ ಆರಂಭಿಸಿರುವ ನಮ್ಮ ಪಯಣಕ್ಕಿಂದು ಶತಕ ಸಂಭ್ರಮ.

ಈ ವಿಶೇಷ ಸಂದರ್ಭದಲ್ಲಿ ನಮ್ಮೊಂದಿಗೆ ಕೈಜೋಡಿಸಿ, ಬೆಂಬಲವಾಗಿ ನಿಂತಿರುವ ನಾಡಿನ ಪ್ರತಿಯೊಬ್ಬರಿಗೂ ಧನ್ಯವಾದಗಳು. ನಿಮ್ಮೆಲ್ಲರ ಸಹಕಾರ ನಿರಂತರವಾಗಿರಲಿ. ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್​ ಮಾಡಿದ್ದಾರೆ.

RELATED ARTICLES

Related Articles

TRENDING ARTICLES