Saturday, November 2, 2024

ಸಿದ್ದರಾಮಯ್ಯ ಕೊಟ್ಟ ಮಾತು ಉಳಿಸಿಕೊಂಡಿದ್ದಾರೆ : ದಿನೇಶ್ ಗುಂಡೂರಾವ್

ಹುಬ್ಬಳ್ಳಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಜನತೆಗೆ ಕೊಟ್ಟಂತ ಮಾತು ಉಳಿಸಿಕೊಂಡಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಹುಬ್ಬಳ್ಳಿಯಲ್ಲಿ 100 ದಿನಗಳ ಆಡಳಿತದಲ್ಲಿ ನಾವು ನುಡಿದಂತೆ ನಡೆದಿದ್ದೇವೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜನಪರ ಆಡಳಿತ ನೀಡುತ್ತಿದೆ. ಯಾವುದೇ ಸರ್ಕಾರ ಅಧಿಕಾರಕ್ಕೆ ಬಂದ ‌ಕೂಡಲೇ ಆಶ್ವಾಶನೆಗಳನ್ನು ಈಡೇರಿಸುವುದಿಲ್ಲ ಎಂದು ತಿಳಿಸಿದರು.

ಇಂದು ಕೆಲ ಕಾರ್ಯಕ್ರಮಗಳ ಹಿನ್ನೆಲೆ ಜಿಲ್ಲೆಗೆ ಆಗಮಿಸಿದ್ದೇನೆ. ಆರೋಗ್ಯ ಇಲಾಖೆಯ ವ್ಯವಸ್ಥೆ ಹಾಗೂ ಪ್ರಗತಿ ಪರಿಶೀಲನೆಗಾಗಿ ಶೀಘ್ರವೇ ಜಿಲ್ಲೆಗೆ ಮತ್ತೆ ಆಗಮಿಸಲಿದ್ದೇನೆ. ಈ ಹಿಂದೆ ಈ ಭಾಗದಲ್ಲಿ ಉಸ್ತುವಾರಿ ಸಚಿವನಾಗಿ ಕೆಲಸ ಮಾಡಿದ್ದೇನೆ. ನಾವು ಜನತೆಗೆ ಒಳ್ಳೆಯದನ್ನೇ ಬಯಸಿದ್ದೇವೆ. ಆದರೆ, ಅದರಲ್ಲಿ ಕೆಲವರು ಮೊಸರಲ್ಲಿ ಕಲ್ಲು ಹುಡುಕುವಂತ ಕೆಲಸ ಮಾಡಿದ್ದರು ಎಂದು ಕುಟುಕಿದರು.

ಇದನ್ನೂ ಓದಿ : ಇನ್ನೊಂದು ವಾರ ರಾಜಕಾರಣದ ಬಗ್ಗೆ ಮಾತನಾಡುವುದಿಲ್ಲ: ಕುಮಾರಸ್ವಾಮಿ

ಆಶಾಕಿರಣ ಯೋಜನೆ ಜಾರಿ

ಈವರೆಗೂ ಯಾವುದೇ ಸರ್ಕಾರ ಕೊಟ್ಟ ಮಾತನ್ನು ಉಳಿಸಿಕೊಂಡಿಲ್ಲ. ಕಾಂಗ್ರೆಸ್ ಸರ್ಕಾರ ಕೊಟ್ಟ ಮಾತಿನಂತೆ ನಡೆದುಕೊಂಡಿದೆ. ಇದು‌ ನಮಗೆ ತುಂಬಾ ಹೆಮ್ಮೆಯ ವಿಷಯ. ಈ ಹಿಂದೆ ಸಾಂಕ್ರಾಮಿಕ ರೋಗಗಳಿಂದ ಸಾಕಷ್ಟು ಸಾವು ನೋವು ಸಂಭವಿಸುತ್ತಿದ್ದವು. ಈಗ ಅಸಾಂಕ್ರಾಮಿಕ ರೋಗಗಳ ಸಂಖ್ಯೆ ಜಾಸ್ತಿಯಾಗುತ್ತಿದೆ. ಈ ತರಹದ ರೋಗಗಳನ್ನ ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಹಾಗೂ ಇಲಾಖೆ ಬದ್ಧವಾಗಿದೆ ಎಂದು ಹೇಳಿದರು.

ಮೊಬೈಲ್ ಯೂನಿಟ್ ಜಾರಿಗೆ ತರಲು ಸರ್ಕಾರ ಯೋಜನೆ ರೂಪಿಸಿದೆ. ಮುಂದಿನ ತಿಂಗಳಿನಿಂದ ಆಶಾಕಿರಣ ಯೋಜನೆ ರೂಪಿಸಲಾಗಿದೆ. ಗ್ರಾಮೀಣ ಭಾಗಕ್ಕೆ ಹೆಚ್ಚು ಒತ್ತು ನೀಡಲಾಗುತ್ತಿದೆ ಎಂದು ದಿನೇಶ್ ಗುಂಡೂರಾವ್ ತಿಳಿಸಿದರು.

RELATED ARTICLES

Related Articles

TRENDING ARTICLES