Wednesday, January 22, 2025

ಗುಡ್ ನ್ಯೂಸ್ : 10 ಕೆಜಿ ಅಕ್ಕಿ ವಿತರಿಸಲು ನಿರ್ಧಾರ

ಬೆಂಗಳೂರು : ಪ್ರತಿ ವ್ಯಕ್ತಿಗೆ ತಲಾ 10 ಕಿಲೋ ಅಕ್ಕಿಯನ್ನು ಉಚಿತವಾಗಿ ವಿತರಿಸಲು ಉದ್ದೇಶಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಕಾಂಗ್ರೆಸ್​ ಸರ್ಕಾರ 100 ದಿನಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಅವರು, ಹಸಿವುಮುಕ್ತ ಕರ್ನಾಟಕ ನಿರ್ಮಾಣದ ಸಂಕಲ್ಪದೊಂದಿಗೆ ನಾವು ಜಾರಿಗೆ ಅನ್ನಭಾಗ್ಯ ಯೋಜನೆ ಜಾರಿಗೊಳಿಸಿದ್ದೇವೆ ಎಂದು ತಿಳಿಸಿದ್ದಾರೆ.

ಅನ್ನಭಾಗ್ಯ ಯೋಜನೆಯಡಿ ನಾಡಿನ 1.28 ಕೋಟಿ ಬಡ ಕುಟುಂಬಗಳ ಫಲಾನುಭವಿಗಳಿಗೆ 10 ಕಿಲೋ ಅಕ್ಕಿ ನೀಡಲಾಗುವುದು. ಸದ್ಯ ಪೂರ್ಣ ಪ್ರಮಾಣದಲ್ಲಿ ಅಕ್ಕಿಯ ಲಭ್ಯತೆಯಿಲ್ಲದ ಕಾರಣಕ್ಕೆ ತಲಾ 5 ಕಿಲೋ ಅಕ್ಕಿ ಹಾಗೂ ಇನ್ನುಳಿದ 5 ಕಿಲೋ ಅಕ್ಕಿಯ ಬದಲಿಗೆ ರೂ.170 ಅನ್ನು ಫಲಾನುಭವಿಗಳ ಖಾತೆಗೆ ನೇರ ವರ್ಗಾವಣೆ ಮಾಡಲಾಗಿದೆ ಎಂದಿದ್ದಾರೆ.

ನಿಮ್ಮೆಲ್ಲರ ಸಹಕಾರವಿರಲಿ

ನಮ್ಮ ಮೊದಲ ‘100 ದಿನಗಳ’ ಆಡಳಿತದಲ್ಲಿ ನುಡಿದಂತೆ ನಡೆಯುತ್ತಿದ್ದೇವೆ ಎಂದು ಹೆಮ್ಮೆಯಿಂದ ಹೇಳಬಯಸುತ್ತೇನೆ. ಗ್ಯಾರಂಟಿಗಳ ಈಡೇರಿಕೆಯ ಜೊತೆಗೆ ಅಭಿವೃದ್ಧಿಯ ರಥವನ್ನು ಮುನ್ನಡೆಸುತ್ತಿರುವ ನಮ್ಮೊಂದಿಗೆ ನಿಮ್ಮೆಲ್ಲರ ಸಹಕಾರವಿರಲಿ ಎಂದು ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

RELATED ARTICLES

Related Articles

TRENDING ARTICLES