Monday, December 23, 2024

ಸಾಕ್ಷಿ ಇದ್ರೆ ಕೊಡಲಿ.. ತಕ್ಕ ಉತ್ತರ ಕೊಡ್ತಿನಿ : ಯತೀಂದ್ರ ಸಿದ್ದರಾಮಯ್ಯ

ಮೈಸೂರು : ನನ್ನ ವಿರುದ್ಧ ಮಾತನಾಡಲು ಏನು ಇಲ್ಲ. ಹೀಗಾಗಿ, ಭ್ರಷ್ಟಾಚಾರದ ಆರೋಪ ಮಾಡುತ್ತಿದ್ದಾರೆ ಎಂದು ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ನನ್ನ ವಿರುದ್ಧದ ಆರೋಪಗಳಿಗೆ ಯಾವ ಸಾಕ್ಷಿ ಇಲ್ಲ. ಯಾವುದೇ ಒಂದು ಸಾಕ್ಷಿ ಇದ್ರೆ ಕೊಡಲಿ. ಅದಕ್ಕೆ ತಕ್ಕ ಉತ್ತರ ಕೊಡುತ್ತೇನೆ ಎನ್ನುವ ಮೂಲಕ ವೈಎಸ್​ಟಿ ಆರೋಪ ಮಾಡಿದ ಮಾಜಿ ಮುಖ್ಯಮಂತ್ರಿ ಹೆಚ್​.ಡಿ ಕುಮಾರಸ್ವಾಮಿಗೆ ತಿರುಗೇಟು ಕೊಟ್ಟಿದ್ದಾರೆ.

ಜೆಡಿಎಸ್ ನವರು ಹತಾಶರಾಗಿದ್ದಾರೆ. ಕೇವಲ 19 ಸ್ಥಾನ ಬಂದಿರುವ ಕಾರಣ ಜೆಡಿಎಸ್ ಅಸ್ತಿತ್ವದ ಪ್ರಶ್ನೆ. ಆಡಳಿತ ಪಕ್ಷದ ವಿರುದ್ಧ ಆರೋಪ ಮಾಡುವುದಕ್ಕೆ ಯಾವುದೇ ವಿಚಾರಗಳು ಸಿಗುತ್ತಿಲ್ಲ. ಹಿಂದೆ ಅವರು ಮಾಡಿದ ತಪ್ಪನ್ನು ನಮ್ಮ ತಲೆ ಮೇಲೆ ಕಟ್ಟಲು ಯತ್ನಿಸುತ್ತಿದ್ದಾರೆ. ನಮ್ಮ ಸರ್ಕಾರದಲ್ಲಿ ಯಾವುದೇ ಭ್ರಷ್ಟಾಚಾರ ನಡೆದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ನಾನು ಭ್ರಷ್ಟಾಚಾರದಲ್ಲಿ ಭಾಗಿಯಾಗಿಲ್ಲ

ಬಿಜೆಪಿ ಸದಸ್ಯರೇ ವಿಎಸ್​ಟಿ ಆರೋಪ ಮಾಡಿದ್ರು. ನಮ್ಮ ಪಕ್ಷದವರು ಯಾರು ಈ ರೀತಿ ಆರೋಪ ಮಾಡಿಲ್ಲ. ಯಾವುದಕ್ಕೂ ಸಾಕ್ಷಿ ಇಲ್ಲ. ಪ್ರತಿ ಪಕ್ಷದವರು ಕೆಸರು ಎರೆಚಿ ಒಡೋಗುತ್ತಿದ್ದಾರೆ. ಮಾಜಿ ಶಾಸಕನಾಗಿ ಕ್ಷೇತ್ರದ ಜನರ ನನ್ನ ಬಳಿ ಬಂದು ಕೇಳಿದಾಗ ಕೆಲಸ ಮಾಡಿಕೊಡುತ್ತಿದ್ದೇನೆ. ಅವರು ಕೊಟ್ಟ ಬೇಡಿಕೆಗಳನ್ನು ಸಿಎಂ ಗಮನಕ್ಕೆ ತಂದಿದ್ದೇನೆ. ಹಾಗೆಂದ ಮಾತ್ರಕ್ಕೆ ನಾನು ಭ್ರಷ್ಟಾಚಾರದಲ್ಲಿ ಭಾಗಿಯಾಗಿಲ್ಲ ಎಂದು ಚಾಟಿ ಬಿಸಿದ್ದಾರೆ.

RELATED ARTICLES

Related Articles

TRENDING ARTICLES