Sunday, January 19, 2025

ಮಳೆಗಾಗಿ ಮುಸ್ಲಿಮರ ಸಾಮೂಹಿಕ ಪ್ರಾರ್ಥನೆ

ಬಳ್ಳಾರಿ : ಗಣಿನಾಡು ಬಳ್ಳಾರಿಯಲ್ಲಿ ಮಳೆಯಿಲ್ಲದೆ ಬರಗಾರ ಹಿನ್ನೆಲೆ ಮಳೆಗಾಗಿ ಪ್ರಾರ್ಥಿಸಿ ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದಾರೆ.

ರಾರಾವಿ ಬಳಿಯ ವೇದಾವತಿ ನದಿಯಲ್ಲಿ ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಮಾಡಿದ್ದಾರೆ. ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ರಾರಾವಿ ಗ್ರಾಮದ ಬಳಿ ಹಾದು ಹೋಗಿರುವ ವೇದಾವತಿ ನದಿಯ ಒಡಲು ಮಳೆಯಿಲ್ಲದೆ ಖಾಲಿ ಖಾಲಿಯಾಗಿದೆ. ಮಳೆಗಾಲದಲ್ಲೇ ವೇದಾವತಿ ನದಿ ಸಂಪೂರ್ಣ ಬತ್ತಿ ಹೋಗಿದೆ. ಈ ಭಾಗದ ರೈತರಿಗೆ ನೀರಿನ ಸಮಸ್ಯೆ ಉಲ್ಬಣಿಸುವ ಸಾಧ್ಯತೆ ಇದೆ.

ನದಿಯಲ್ಲಿ ನೀರಿಲ್ಲದೆ ಅಂತರ್ಜಲ ಮಟ್ಟ ತೀವ್ರ ಕುಸಿದಿದೆ. ಪಶ್ಚಿಮ ಘಟ್ಟಗಳಲ್ಲಿ ಮಳೆಯ ಪ್ರಮಾಣ ಕಡಿಮೆ ಆಗಿರುವುದರಿಂದ ಹಿರಿಯೂರು ಅಣೆಕಟ್ಟಿನಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿ ನದಿಗೆ ನೀರು ಇಲ್ಲದಂತಾಗಿದೆ. ಈ ಹಿನ್ನೆಲೆಯಲ್ಲಿ ಕಳೆದ ಎರಡು ಮೂರು ದಿನಗಳಿಂದ ಮಳೆಗಾಗಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.

RELATED ARTICLES

Related Articles

TRENDING ARTICLES