ಬೆಂಗಳೂರು : 10 ನೇ ತರಗತಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಒಳ್ಳೆ ಅಂಕಗಳನ್ನು ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಮಾಡಲಾಯಿತು.
ಕರ್ನಾಟಕ ಆರ್ಯವೈಶ್ಯ ಮಹಾ ಮಂಡಳಿಯವರು ಈ ಭಾರಿ 10 ನೇ ತರಗತಿ ಹಾಗೂ ದ್ವೀತಿಯ ಪಿಯುಸಿಯಲ್ಲಿ ಒಳ್ಳೆ ಅಂಕಗಳನ್ನು ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಈ ಕಾರ್ಯಕ್ರಮ ನಗರದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಮಾಡಲಾಯಿತು.
ಇದನ್ನು ಓದಿ : ಇವ್ರು ಚಾರ್ಜ್ಶೀಟ್ನಲ್ಲಿರೋರ ರಕ್ಷಣೆ ಮಾಡ್ತಾರಾ? : ಬೊಮ್ಮಾಯಿ ಕಿಡಿ
ಇವತ್ತಿನ ಈ ಕಾರ್ಯಕ್ರಮದಲ್ಲಿ 625 ಕ್ಕೆ 624 ಅಂಕಗಳನ್ನು ಪಡೆದ ಬೆಂಗಳೂರಿನ ಸಾಯಿ ಶರಣ್, ಕೋಲಾರದ ಕೌಶಿಕ್, ಮತ್ತು ರಾಯಚೂರಿನ ಸ್ವಾತಿ ಸೇರಿದಂತೆ ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಆಗಮಿಸಿದ್ದರು. ಈ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಈ ಕಾರ್ಯಕ್ರಮದಲ್ಲಿ ಉದ್ಯಮಿ , ರಾಜಕಾರಣಿ, ಕರ್ನಾಟಕ ಆರ್ಯವೈಶ್ಯ ಮಹಾಮಂಡಳಿಯ ರಾಜ್ಯಾಧ್ಯಕ್ಷ ಡಾ.ಟಿ.ಎ.ಶರವಣ ಅವರು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಿ ಪ್ರೋತ್ಸಾಹಿಸಿದರು.
ಬಳಿಕ ಪ್ರತಿ ವಿದ್ಯಾರ್ಥಿಗಳಿಗೆ ತಲಾ 5 ಸಾವಿರ ರೂಪಾಯಿ ಸ್ಮರಣಿಕ ನೀಡಿ ಗೌರವಿಸಲಾಯಿತು. ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಎಮ್ ಎಲ್ ಸಿ ಡಾ. ಟಿ.ಎ. ಶರವಣ ನೇತ್ರತ್ವದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು, ಐಎಎಸ್ ಅಧಿಕಾರಿ ಗಿರೀಶ್, ಉಪಪೊಲೀಸ್ ಆಯುಕ್ತ ಶ್ರೀನಿವಾಸ್ ಗೌಡ ಆರ್ಯವೈಶ್ಯ ಸಮುದಾಯದ ಅಭಿವೃದ್ಧಿ ನಿಗಮದ ಎಂಡಿ ದೀಪಶ್ರಿ ಸೇರಿದಂತೆ ಹಲವು ಗಣ್ಯ ವ್ಯಕ್ತಿಗಳು ಭಾಗಿಯಾಗಿದ್ದರು.