Wednesday, January 22, 2025

ಭೀಕರ ಅಪಘಾತ : 6 ಜನರ ಉಸಿರು ಕಸಿದ ಕಿಲ್ಲರ್ KSRTC

ರಾಮನಗರ : ಕನಕಪುರದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿ ಕಾರಲ್ಲಿದ್ದ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕನಕಪುರ ತಾಲ್ಲೂಕಿನ ಸಾತನೂರು ಕರಮ್ಮಾಳೆ ಗೇಟ್ ಬಳಿ ಕೆಎಸ್ಸಾರ್ಟಿಸಿ ಬಸ್ ಹಾಗೂ ಕ್ವಾಲಿಸ್ ಕಾರ್ ನಡುವೆ ಭೀಕರ ಅಪಘಾತ ಸಂಭವಿಸಿದೆ.

ಮಹದೇಶ್ವರ ಬೆಟ್ಟದಿಂದ ವಾಪಾಸ್ ಬರುತ್ತಿದ್ದ ಕ್ವಾಲಿಸ್ ಕಾರು ಹಾಗೂ ಕೆಎಸ್ಸಾರ್ಟಿಸಿ ಬಸ್ ನಡುವೆ ದುರ್ಘಟನೆ ನಡೆದಿದೆ. ಕೆಎಸ್ಸಾರ್ಟಿಸಿ ಬಸ್ ಬೆಂಗಳೂರಿನಿಂದ ಮಳವಳ್ಳಿ ಕಡೆ ಹೋಗುತ್ತಿತ್ತು. ಬಸ್​ನಲ್ಲಿದ್ದ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಸ್ಥಳಕ್ಕೆ ಸಾತನೂರು ಪೊಲೀಸರ‌ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಗೊಂಡವರಿಗೆ ಸಾತನೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಭೀಕರ ಅಪಘಾತಕ್ಕೆ ಕ್ವಾಲೀಸ್ ಕಾರು ಸಂಪೂರ್ಣ ಜಖಂ ಆಗಿದೆ. ಅಪಘಾತಕ್ಕೆ ಅತೀವೆಗವೇ ಕಾರಣ ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ. ಕನಕಪುರ ಹಾಗೂ ಮಳವಳ್ಳಿ ಮುಖ್ಯರಸ್ತೆಯಲ್ಲಿ ನಿತ್ಯ ಅಪಘಾತಗಳ ಸಂಖ್ಯೆ ಹೆಚ್ಚಾಗಿದ್ದು ಪೊಲೀಸರು ಅಪಘಾತ ಪ್ರಕರಣಗಳಿಗೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದ್ದಾರೆ.

ಇನ್ನೂ ‌ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ರಾಮನಗರ ಎಸ್ಪಿ ಕಾರ್ತಿಕ್ ರೆಡ್ಡಿ ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರ ಮಾಹಿತಿ ಸಂಗ್ರಹಿಸಿದ್ದಾರೆ. ಮೃತದೇಹಗಳ ಮರಣೋತ್ತರ ಪರೀಕೆಗೆ ರವಾನಿಸಿದ್ದಾರೆ.

RELATED ARTICLES

Related Articles

TRENDING ARTICLES