Thursday, September 11, 2025
HomeUncategorizedಸೌಜನ್ಯ ಅತ್ಯಾಚಾರ ಪ್ರಕರಣ ಮರುತನಿಖೆ ಸಾಧ್ಯವಿಲ್ಲ: ಗೃಹಸಚಿವ ಜಿ.ಪರಮೇಶ್ವರ

ಸೌಜನ್ಯ ಅತ್ಯಾಚಾರ ಪ್ರಕರಣ ಮರುತನಿಖೆ ಸಾಧ್ಯವಿಲ್ಲ: ಗೃಹಸಚಿವ ಜಿ.ಪರಮೇಶ್ವರ

ಹಾಸನ : ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ಸಾಧ್ಯವಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.

ತಾಲೂಕಿನ ಹಾರನಹಳ್ಳಿ ಕೋಡಿ ಮಠಕ್ಕೆ ಭಾನುವಾರ ಭೇಟಿ ನೀಡಿದ್ದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೌಜನ್ಯಾ ಕೊಲೆ ಪ್ರಕರಣ ಸಿಬಿಐ ತನಿಖೆಯಾಗಬೇಕೆಂಬ ಒತ್ತಾಯದ ಹಿನ್ನೆಲೆಯಲ್ಲಿ ಈ ಹಿಂದೆ ಸಿಬಿಐಗೆ ಪ್ರಕರಣವನ್ನು ವಹಿಸಲಾಗಿತ್ತು. ಸಿಬಿಐನವರು ತನಿಖೆ ನಡೆಸಿ ವರದಿ ಕೊಟ್ಟಿದ್ದಾರೆ, ಮತ್ತಿನ್ನೇನಿದೆ ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ತಂದೆ ಅಂತ್ಯಕ್ರಿಯೆ ಮಾಡಿ ಇಲ್ಲ ಹೆಣ ಬಿಸಾಕಿ ಎಂದ ಮಗಳು : ಪೊಲೀಸರಿಂದ ಅಂತ್ಯಕ್ರಿಯೆ

ಈಗ ಸೌಜನ್ಯಾ ಕೊಲೆ ಪ್ರಕರಣದಲ್ಲಿ ಸರ್ಕಾರದ ನಿಲುವಿನ ಪ್ರಶ್ನೆ ಅಲ್ಲ ಈಗ ಮರು ತನಿಖೆ ಆಗಬೇಕು ಎನ್ನುತ್ತಿರುವವರು ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸ ಬೇಕು. ಕೋರ್ಟ್ ಏನು ನಿರ್ದೇಶನ ನೀಡುತ್ತದೆಯೋ ಅದನ್ನಾಧರಿಸಿ ಸರ್ಕಾರ ಕ್ರಮ ಕೈಗೊಳ್ಳುತ್ತದೆ. ಕೋರ್ಟ್ ಮರು ತನಿಖೆ ಮಾಡಿ ಎಂದು ನಿರ್ದೇಶಿಸಿದರೆ ಸರ್ಕಾರ ಮರು ತನಿಖೆ ಮಾಡಬಹುದು. ಅದನ್ನು ಬಿಟ್ಟು ಈಗ ಸರ್ಕಾರ ಏನೂ ಮಾಡಲಾಗದು ಎಂದರು.

ದೇಶದಲ್ಲಿ ಕಾನೂನು ಎಲ್ಲರಿಗೂ ಒಂದೇ. ಸೌಜನ್ಯಾ ಕೊಲೆ ಪ್ರಕರಣದಲ್ಲಿ ಕಾನೂನು ಪ್ರಕಾರ ಏನು ಮಾಡಬೇಕಿತ್ತೋ ಅದನ್ನು ಮಾಡಿ ಆಗಿದೆ. ಮರು ತನಿಖೆ ಮಾಡಬೇಕು ಅನ್ನುವವರು ಕೋರ್ಟ್‌ಗೆಹೋಗಿ ನಿರ್ದೇಶನ ತರಲಿ. ಅದನ್ನು ಬಿಟ್ಟು ಎಸ್‌ಐಟಿ ತನಿಖೆ ರಾಜ್ಯ ಸರ್ಕಾರದ ಹಂತದಲ್ಲಿ ಸಾಧ್ಯವಿಲ್ಲ ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments