Saturday, January 11, 2025

ಸಿದ್ಧಾಂತ ಒಪ್ಪುವವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳಿಸಲಾಗುವುದು: ಸಿಎಂ

ಮೈಸೂರು : ನಮ್ಮ ಪಕ್ಷದ ಸಿದ್ಧಾಂತವನ್ನು ಒಪ್ಪಿ ಬರುವವರನ್ನು  ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು ಮೈಸೂರಿನ ಸರ್ಕಾರಿ ಭವನದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಇಸ್ರೋಗೆ ಭೇಟಿ ನೀಡಲು ಬೆಂಗಳೂರಿಗೆ ಆಗಮಿಸಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನಮಗೆ ಸಗವಾಗತ ಮಾಡಲು  ಆಗಮಿಸುವುದು ಬೇಡ ಎಂದು ಸೂಚಿಸಿದ್ದರು. ಆದ್ದರಿಂದ ನಾವು ಸ್ವಾಗತಕ್ಕೆ ತೆರಳಲಿಲ್ಲ ಎಂದರು.

ಇದನ್ನೂ ಓದಿ: ಚಂದ್ರನನ್ನು ‘ಹಿಂದೂ ರಾಷ್ಟ್ರ’ ಎಂದು ಘೋಷಿಸಿ : ಚಕ್ರಪಾಣಿ ಮಹಾರಾಜ

ಬಿಜೆಪಿ ಕರ್ನಾಟಕದಲ್ಲಿ ದಿವಾಳಿಯಾಗಿದೆ : ತಮ್ಮ ಪಕ್ಷದವರನ್ನೇ ಪ್ರಧಾನಿಗಳು ಬರಮಾಡಿಕೊಂಡಿಲ್ಲದ್ದರ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು , ಬಿಜೆಪಿ ಕರ್ನಾಟಕದಲ್ಲಿ ದಿವಾಳಿಯಾಗಿದೆ. ಸರ್ಕಾರ ಅಸ್ತಿತ್ವಕ್ಕೆ ಬಂದು ನೂರು ದಿನಗಳಾದರೂ ಒಬ್ಬ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲಾಗಿಲ್ಲ. ಕರ್ನಾಟಕದ ಇತಿಹಾಸದಲ್ಲಿ ವಿರೋಧ ಪಕ್ಷಕ್ಕೆ ಇಂಥ ಪರಿಸ್ಥಿತಿ ಎದುರಾಗಿರಲ್ಲಿಲ್ಲ ಎಂದರು.

RELATED ARTICLES

Related Articles

TRENDING ARTICLES