Wednesday, January 22, 2025

ಕಾವೇರಿ ನೀರು ಹಂಚಿಕೆ ರಾಜ್ಯಕ್ಕೆ ಹಿನ್ನಡೆ: ತಮಿಳುನಾಡಿಗೆ 15 ದಿನ ನೀರು ಬಿಡುಗಡೆಗೆ ಸೂಚನೆ!

ಬೆಂಗಳೂರು : ತಮಿಳುನಾಡಿಗೆ ಕಾವೇರಿ ನದಿ ನೀರು ಹಂಚಿಕೆ ವಿವಾದ ಕಾವೇರಿ ಹೋರಾಟದಲ್ಲಿ ಕರ್ನಾಟಕಕ್ಕೆ ಭಾರೀ ಹಿನ್ನಡೆಯಾಗಿದ್ದು ತಮಿಳುನಾಡಿಗೆ 15 ದಿನಗಳವರೆಗೆ ಪ್ರತಿದಿನ 5 ಸಾವಿರ ಕ್ಯೂಸೆಕ್ ನೀರು ಹರಿಸಲೇಬೇಕು ಎಂದು ಕಾವೇರಿ ನೀರು ನಿರ್ವಹಣಾ ಸಮಿತಿ ಸೂಚನೆ ನೀಡಿದೆ.

ನಿನ್ನೆ ನಡೆದ ಕಾವೇರಿ ನೀರು ನಿರ್ವಹಣಾ ಸಮಿತಿ ಸಭೆಯಲ್ಲಿ ಉಭಯ ರಾಜ್ಯಗಳ ಜಲಾಶಯಗಳಲ್ಲಿನ ನೀರಿನ ಸಂಗ್ರಹ, ಮಳೆ ಪ್ರಮಾಣದ ಬಗ್ಗೆ ಸಭೆಯಲ್ಲಿ ವಿಸ್ತೃತವಾಗಿ ಚರ್ಚೆ ನಡೆದಿದ್ದು 2 ರಾಜ್ಯಗಳ ವಾಸ್ತವ ಪರಿಸ್ಥಿತಿ ಆಧರಿಸಿ ಆದೇಶ ನೀಡಿದೆ.

ಆಗಸ್ಟ್​ 29 ರಿಂದ ಆ.12 ರವರೆಗೆ ಪ್ರತಿನಿತ್ಯ 5 ಸಾವಿರ ಕ್ಯೂಸೆಕ್ ನೀರು ಹರಿಸಲು ಕಾವೇರಿ ನೀರು ನಿರ್ವಹಣಾ ಸಮಿತಿ ಸೂಚನೆ ನೀಡದೆ. ಈ ಸಭೆಯಲ್ಲಿ ಕರ್ನಾಟಕ, ತಮಿಳುನಾಡಿನ ಅಧಿಕಾರಿಗಳು ಕೇಂದ್ರ ಜಲ ಆಯೋಗದ ಅಧಿಕಾರಿಗಳು ಭಾಗಿಯಾಗಿದ್ದರು.

RELATED ARTICLES

Related Articles

TRENDING ARTICLES