ಶಿವಮೊಗ್ಗ : ನನ್ನ ಫೇಸ್ ಬುಕ್ ಖಾತೆಯಿಂದ ಮೆಸೇಜ್ (ಕಮೆಂಟ್) ಹೋಗಿದೆ ಅಂತ ಎಫ್ಐಆರ್ ಹಾಕಿದ್ದಾರೆ ಎಂದು ಚಕ್ರವರ್ತಿ ಸೂಲಿಬೆಲೆ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ನನ್ನ ಸೋಶಿಯಲ್ ಮೀಡಿಯಾ ಅಕೌಂಟ್ ಅನ್ನು ನಮ್ಮ ಹುಡುಗರು ಹ್ಯಾಂಡಲ್ ಮಾಡುತ್ತಾರೆ. ಈ ವಿಷಯದ ಬಗ್ಗೆ ನ್ಯಾಯಾಲಯದಲ್ಲಿ ಉತ್ತರ ನೀಡುತ್ತೇನೆ ಎಂದು ತಿಳಿಸಿದ್ದಾರೆ.
ಇಂತಹ ಸಣ್ಣ ವಿಷಯಗಳನ್ನು ಕೂಡ ಪೊಲೀಸರು ಹೇಗೆ ಎಫ್ಐಆರ್ ದಾಖಲಿಸಿದರು ಎಂಬುದನ್ನು ನ್ಯಾಯಾಲಯದಲ್ಲೇ ಪ್ರಶ್ನಿಸುತ್ತೇನೆ. ಇಂತಹ ಅನೇಕ ಸಂಗತಿಗಳು ಈ ಹಿಂದೆ ಕೂಡ ನಡೆದಿದೆ. ಆದರೆ, ಆವಾಗಲೆಲ್ಲ ಎಫ್ಐಆರ್ ದಾಖಲಾಗಿರಲಿಲ್ಲ. ಈ ಸಂಗತಿಯನ್ನು ಡೆಫಿನೆಟ್ಲಿ ಕೋರ್ಟ್ ನಲ್ಲಿ ಪ್ರಶ್ನೆ ಮಾಡುತ್ತೇನೆ ಎಂದು ಹೇಳಿದ್ದಾರೆ.
ಪೊಲೀಸ್ ಇಲಾಖೆಗೆ ಧನ್ಯವಾದ
ಈ ಕಾರ್ಯಕ್ರಮಕ್ಕೆ ಪ್ರತಿಭಟನೆಯ ಸಾಧ್ಯತೆ ಹಿನ್ನೆಲೆ ಪೊಲೀಸರು ಹೆಚ್ಚಿನ ಭದ್ರತೆ ನೀಡಿದ್ದಾರೆ. ಕಾರ್ಯಕ್ರಮ ಸುಸೂತ್ರವಾಗಿ ನಡೆಯಲು ಪೊಲೀಸರು ಸಹಕರಿಸಿದ್ದಾರೆ. ಇದಕ್ಕಾಗಿ ಪೊಲೀಸ್ ಇಲಾಖೆಗೆ ಧನ್ಯವಾದ ತಿಳಿಸುತ್ತೇನೆ ಎಂದು ಸೂಲಿಬೆಲೆ ತಿಳಿಸಿದ್ದಾರೆ.
ಕಾಂಗ್ರೆಸ್ ಕಾರ್ಯಕರ್ತೆಗೆ ಅವಹೇಳನ ಆರೋಪಕ್ಕೆ ಸಂಬಂಧಿಸಿದಂತೆ ಚಕ್ರವರ್ತಿ ಸೂಲಿಬೆಲೆ ವಿರುದ್ದ ಶಿವಮೊಗ್ಗ ನಗರದ ವಿನೋಬ ನಗರ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 504 ಹಾಗೂ 509 ಪ್ರಕರಣ ದಾಖಲಾಗಿದೆ.