Monday, December 23, 2024

12 ನೇ ಮಹಡಿಯಿಂದ ಬಿದ್ದು SSLC ವಿದ್ಯಾರ್ಥಿನಿ ಆತ್ಮಹತ್ಯೆ

ಬೆಂಗಳೂರು : ಮಹಡಿಯಿಂದ ಬಿದ್ದು 10 ನೇ ತರಗತಿ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಬೆಳ್ಳೆಂದೂರಿನ ಕ್ಲಾಸಿಕ್ ಅಪಾರ್ಟ್ಮೆಂಟ್​ನಲ್ಲಿ ನಡೆದಿದೆ.

ಬೆಳ್ಳೆಂದೂರಿನ ಕ್ಲಾಸಿಕ್ ಅಪಾರ್ಟ್ಮೆಂಟ್ ನಲ್ಲಿ ವಾಸವಾಗಿದ್ದ ಜೆಸ್ಸಿಕಾ (14) ಮೃತ ದುರ್ದೈವಿ. ಎಂಬ ಬಾಲಕಿ ಕುಟುಂಬ. ಜೆಸ್ಸಿಕಾ ನಗರದ ಖಾಸಗಿ ಶಾಲೆಯೊಂದರಲ್ಲಿ 10 ನೇ ತರಗತಿ ಓದುತ್ತಿದ್ದಳು.

ಇದನ್ನು ಓದಿ : ವಿದ್ಯುತ್ ಶಾಕ್ ಸರ್ಕ್ಯೂಟ್​ನಿಂದ ಬೆಂಕಿ ಅವಘಡ

ಆದರೆ ಇಂದು ಬೆಳಗ್ಗೆ 11 ಗಂಟೆಯಲ್ಲಿ ಮನೆಯಲ್ಲಿ ಪೋಷಕರು ಇಲ್ಲದ ಸಮಯ ನೋಡಿಕೊಂಡು ಬಾಲಕಿ ತಮ್ಮ ಅಪಾರ್ಟ್ಮೆಂಟ್​ನ 12 ನೇ ಮಹಡಿಯಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆದರೆ ಬಾಲಕಿ ಆತ್ಮಹತ್ಯೆಗೆ ಕಾರಣ ಮಾತ್ರ ತಿಳಿದು ಬಂದಿಲ್ಲ.

ಸದ್ಯ ಸ್ಥಳಕ್ಕೆ ಬೆಳ್ಳೆಂದೂರು ಪೋಲಿಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

RELATED ARTICLES

Related Articles

TRENDING ARTICLES