Monday, December 23, 2024

ಹಂಸಲೇಖ ಅವರಿಂದ ದಸರಾ ಉದ್ಘಾಟನೆ : ಸಿಎಂ ಘೋಷಣೆ

ಮೈಸೂರು : ಮೈಸೂರು ದಸರಾ ಮಹೋತ್ಸವದ ಉದ್ಘಾಟಕರ ಹೆಸರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ.

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಈ ಬಾರಿ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರು ದಸರಾ ಮಹೋತ್ಸವ ಉದ್ಘಾಟಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ದಶಕಗಳ ಕಾಲ ಕನ್ನಡ ಚಿತ್ರಗಳಿಗೆ ಸಂಗೀತದ ಮಾಧುರ್ಯ‌ ಮತ್ತು ಚಿಂತನಶೀಲವಾದ ಸಾಹಿತ್ಯ ನೀಡಿ ಕಲಾರಸಿಕರನ್ನು ರಂಜಿಸುತ್ತಾ ರಾಜ್ಯದಲ್ಲಿ ಮನೆಮಾತಾಗಿರುವ ಹಂಸಲೇಖ ಅವರು ದಸರಾ ಮಹೋತ್ಸವದ ಚಾಲನೆಗೆ ಅತ್ಯಂತ ಅರ್ಹರಾಗಿದ್ದಾರೆ ಎಂದಿದ್ದಾರೆ.

ಸರ್ಕಾರ 100 ದಿನ ಪೂರೈಸಿದ ವಿಚಾರವಾಗಿ ಮಾತನಾಡಿ, ನಮಗೆ ಇದೇನು ಸವಾಲು ಎನ್ನಿಸಲಿಲ್ಲ. ಗ್ಯಾರೆಂಟಿ ವಿಚಾರದಲ್ಲಿ ನಮಗೆ ಬದ್ಧತೆ ಇತ್ತು. ಹೀಗಾಗಿ, ಅವುಗಳ ಜಾರಿ ಕಠಿಣ ಅನಿಸಲಿಲ್ಲ. ಮಾತು ಕೊಟ್ಟಂತೆ ಗ್ಯಾರೆಂಟಿಗಳ ಜಾರಿ ಮಾಡುತ್ತಿದ್ದೇವೆ‌ ಎಂದು ಹೇಳಿದ್ದಾರೆ.

ಖುದ್ದು ಪ್ರಧಾನಿ ನರೇಂದ್ರ ಮೋದಿ ಕೂಡ ಗ್ಯಾರೆಂಟಿಗಳ ಬಗ್ಗೆ ಆರೋಪ ಮಾಡುತ್ತಿದ್ದರು. ಆದರೆ, ಸರ್ಕಾರ ರಾಜ್ಯ ಯಾವ ದಿವಾಳಿಯೂ ಆಗಿಲ್ಲ. ಎಲ್ಲವನ್ನೂ ವ್ಯವಸ್ಥಿತವಾಗಿ ಜಾರಿ ಮಾಡುತ್ತಿದ್ದೇವೆ. ಗೃಹಲಕ್ಷ್ಮೀಗೆ ವಾರ್ಷಿಕ 32 ಸಾವಿರ ಕೋಟಿ ಖರ್ಚಾಗುತ್ತೆ. ದೇಶದ ಇತಿಹಾಸದಲ್ಲೇ ಒಂದು ಯೋಜನೆ ಇಷ್ಟು ದೊಡ್ಡ ಪ್ರಮಾಣದ ಹಣ ಖರ್ಚು ಮಾಡುತ್ತಿರುವುದು ಇದೇ ಮೊದಲು ಎಂದು ವಿಪಕ್ಷಗಳಿಗೆ ಚಾಟಿ ಬೀಸಿದ್ದಾರೆ.

ಬಿಜೆಪಿಗೆ ಯಾವ ನೈತಿಕತೆ ಇದೆ?

ಬಿಜೆಪಿ ಚಾರ್ಜ್‌ಶೀಟ್ ವಿಚಾರವಾಗಿ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಡಿಮಿಡಿಗೊಂಡರು. ಅಧಿಕಾರದಲ್ಲಿ ಇದ್ದಾಗ ರಾಜ್ಯ ಕೊಳ್ಳೆ ಹೊಡೆದರು. ಬಿಜೆಪಿಯವರೆಗೆ ಯಾವ ನೈತಿಕತೆ ಇದೆ? ಈಗ ಚಾರ್ಜ್‌ಶೀಟ್ ಮಾಡ್ತಾರಂತೆ ಎಂದು ಗರಂ ಆಗಿದ್ದಾರೆ.

RELATED ARTICLES

Related Articles

TRENDING ARTICLES