Monday, December 23, 2024

ಗೃಹಲಕ್ಷ್ಮಿ ಯೋಜನೆಗೆ ರಾಹುಲ್ ಗಾಂಧಿ ಚಾಲನೆ

ಮೈಸೂರು : ಮನೆಯ ಯಜಮಾನಿಗೆ ಮಾಸಿಕ 2,000 ರೂ. ಸಹಾಯಧನವನ್ನುನೀಡುವ ಗೃಹಲಕ್ಷ್ಮಿ ಯೋಜನೆಗೆ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಅಧಿಕೃತವಾಗಿ ಚಾಲನೆ ನೀಡಿದರು.

ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಕಾಂಗ್ರೆಸ್​​ ಸರ್ಕಾರದ ನಾಲ್ಕನೇ ಗ್ಯಾರಂಟಿಗೆ ಜ್ಯೋತಿ ಬೆಳಗುವ ಮೂಲಕ ಹಸಿರು ನಿಶಾನೆ ತೋರಿದರು.

ಈಗಾಗಲೇ ಶಕ್ತಿ ಯೋಜನೆ, ಅನ್ನಭಾಗ್ಯ, ಗೃಹಜ್ಯೋತಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಿರುವ ರಾಜ್ಯ ಸರ್ಕಾರ ಇಂದು ಗೃಹಲಕ್ಷಿ ಯೋಜನೆಯ 2,000 ರೂ. ಹಣವನ್ನು ಮಹಿಳೆಯರ ಖಾತೆಗೆ ವರ್ಗಾಯಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದೆ.

ನಿಮ್ಮ ಮನೆಬಾಗಿಲಿಗೇ ಗೃಹಲಕ್ಷ್ಮಿ

ಕರ್ನಾಟಕ ಅಭಿವೃದ್ಧಿ ಮಾದರಿ ಆಡಳಿತಕ್ಕೆ 100 ದಿನಗಳು ತುಂಬಿರುವ ಈ ಹೊತ್ತಿನಲ್ಲಿ ನಾವು ನುಡಿದಂತೆ ನಡೆಯುತ್ತಿದ್ದೇವೆ. ನಿಮ್ಮ ಮನೆಬಾಗಿಲಿಗೆ ಇಂದಿನಿಂದ ನಮ್ಮ ಗೃಹಲಕ್ಷ್ಮಿ ಯೋಜನೆಯಡಿ 2,000 ರೂಪಾಯಿ ತಲುಪಲಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

RELATED ARTICLES

Related Articles

TRENDING ARTICLES