Wednesday, January 22, 2025

ರಾಹುಲ್ ಗಾಂಧಿ ಯಾರಿಗೂ ಹೆದರಲ್ಲ : ಮಲ್ಲಿಕಾರ್ಜುನ ಖರ್ಗೆ

ಮೈಸೂರು : ರಾಹುಲ್ ಗಾಂಧಿ ಅವರು ಯಾರಿಗೂ ಹೆದರುವುದಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗುಡುಗಿದರು.

ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಹಮ್ಮಿಕೊಂಡಿದ್ದ ಗೃಹಲಕ್ಷ್ಮಿ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಇಲ್ಲಿ ಮೋದಿ ಹೆಸರು ಹೇಳಿದರೆ ಕೇಸ್ ಹಾಕುತ್ತಾರೆ. ಮೋದಿ ಅಂದಿದ್ದಕ್ಕೆ ರಾಹುಲ್ ಗಾಂಧಿ ಮೇಲೆ ಕೇಸ್ ಹಾಕಿದರು. ಆದರೆ, ರಾಹುಲ್ ಗಾಂಧಿ ಯಾವುದಕ್ಕೂ ಹೆದರಲ್ಲ. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಭಾರತ್ ಜೋಡೋ ಯಾತ್ರೆ ಮಾಡಿ ಜನರ ಸಮಸ್ಯೆ ಆಲಿಸಿದ್ದಾರೆ. ಕೇಂದ್ರ ಯಾವ ನಾಯಕ ಈ ರೀತಿ ಮಾಡಿದ್ದಾರೆ? ಎಂದು ಪ್ರಶ್ನಿಸಿದರು.

ಬೋಗಸ್ ಅಂತ ಲೇವಡಿ ಮಾಡಿದ್ರು

ಚುನಾವಣೆ ಮುಂಚೆ ನಾವು ಗ್ಯಾರಂಟಿ ಘೋಷಣೆ ಮಾಡಿದಾಗ, ಪ್ರಧಾನಿ ಮೋದಿ ಹಾಗೂ ಕೇಂದ್ರ ನಾಯಕರು ಟೀಕೆ ಮಾಡಿದರು. ಇದರಿಂದ ಆರ್ಥಿಕತೆ ಕುಸಿಯುತ್ತೆ, ಬೋಗಸ್ ಅಂತ ಲೇವಡಿ ಮಾಡಿದ್ದರು. ಆದರೆ, ನಾವು ಇದನ್ನು ಸಾಧಿಸಿ ತೊರಿಸಿದ್ದೇವೆ. ಯಾವ ಸರ್ಕಾರವೂ ಈ ರೀತಿಯ ಯೋಜನೆಗಳನ್ನು ಮಾಡಿಲ್ಲ. ಇಡೀ ಭಾರತದಲ್ಲಿ ಒಪ್ಪುವಂತಹ ಗ್ಯಾರಂಟಿಗಳಿವು ಎಂದು ತಿರುಗೇಟು ಕೊಟ್ಟರು.

ಕಾಂಗ್ರೆಸ್ ವಾಗ್ದಾನ ಮಾಡಿದನ್ನು ಪೂರೈಸಿದೆ. ರಾಹುಲ್ ಗಾಂಧಿ ತಮ್ಮ ಭಾಷಣದಲ್ಲಿ ಹೇಳಿದರು. ನಮ್ಮ ಸರ್ಕಾರ ನುಡಿದಂತೆ ನಡೆದಿದೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಸರ್ಕಾರ 5 ಗ್ಯಾರಂಟಿಗಳನ್ನು ಘೋಷಿಸಿದ್ದು, ಈಗಾಗಲೇ 4 ಗ್ಯಾರಂಟಿ ಘೋಷಣೆಯಾಗಿದೆ. ಒಂದು ಮಾತ್ರ ಬಾಕಿ ಇದೆ. ಅದು ಕೂಡ ಅನುಷ್ಠಾನವಾಗಲಿದೆ ಎಂದು ಹೇಳಿದರು.

RELATED ARTICLES

Related Articles

TRENDING ARTICLES