Monday, December 23, 2024

ರಸ್ತೆ ಬದಿಯಲ್ಲಿದ್ದ ಕಾರ್ಮಿಕರಿಗೆ ಕಾರು ಡಿಕ್ಕಿ; ಮೂವರು ದುರ್ಮರಣ

ಮಂಗಳೂರು : ರಸ್ತೆ ಬದಿಯಲ್ಲಿ ನಿಂತಿದ್ದ ಕಾರ್ಮಿಕರಿಗೆ ಕಾರು ಒಂದು ಡಿಕ್ಕಿ ಹೊಡೆದ ಹಿನ್ನೆಲೆ ಮೂವರು ಸಾವನ್ನಪ್ಪಿರುವ ಘಟನೆ ಸುಳ್ಯ ತಾಲೂಕಿನ ಅಡ್ಕಾರು ಎಂಬಲ್ಲಿ ನಡೆದಿದೆ.

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ನಿವಾಸಿಗಳಾದ ಚಂದ್ರಪ್ಪ, ರೇಗಪ್ಪ ಮತ್ತು ಮಾಂತೇಶ್ ಮೃತ ದುರ್ದೈವಿಗಳು. ಈ ಮೂವರು ಕಾರ್ಮಿಕರು ರಸ್ತೆ ಬದಿಯಲ್ಲಿ ನಿಂತಿದ್ದ ವೇಳೆ ಮಡಿಕೇರಿ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರುವೊಂದು, ಚಾಲಕನ ನಿಯಂತ್ರಣ ತಪ್ಪಿ ಕಾರ್ಮಿಕರಿಗೆ ಡಿಕ್ಕಿ ಹೊಡೆದಿದೆ.

ಇದನ್ನು ಓದಿ : ಯುವ ಕಬ್ಬಡಿ ಆಟಗಾರ ಆತ್ಮಹತ್ಯೆ

ಅಷ್ಟೇ ಅಲ್ಲದೆ ಕಾರ್ಮಿಕರಿಗೆ ಡಿಕ್ಕಿ ಹೊಡೆದ ಕಾರು ಪಕ್ಕದಲ್ಲಿ ನಿಂತಿದ್ದ ಲಾರಿಗೂ ಡಿಕ್ಕಿ ಹೊಡೆದಿದೆ.  ಅಪಘಾತದಲ್ಲಿ ಮೂವರು ಗಂಭೀರ ಗಾಯಗೊಂಡಿದ್ದು, ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೂವರು ಮೃತಪಟ್ಟಿದ್ದಾರೆ.

ಈ ಘಟನಾ ಸಂಬಂಧ ಸುಳ್ಯ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

Related Articles

TRENDING ARTICLES