Wednesday, January 22, 2025

ನೂತನ ನಾಮನಿರ್ದೇಶಿತ ಪರಿಷತ್​ ಸದಸ್ಯರ ಪ್ರಮಾಣ ವಚನ ಸ್ವೀಕಾರ!

ಬೆಂಗಳೂರು : ವಿಧಾನ ಪರಿಷತ್ ಗೆ ನೂತನವಾಗಿ ನಾಮ ನಿರ್ದೇಶನಗೊಂಡ ಸದಸ್ಯರ  ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮವನ್ನು ವಿಧಾನಸಭಾ ಸಭಾಂಗಣದಲ್ಲಿ  ಇಂದು ಹಮ್ಮಿಕೊಳ್ಳಲಾಗಿತ್ತು.

ಈ ಕಾರ್ಯಕ್ರಮದಲ್ಲಿ ವಿಧಾನಪರಿಷತ್ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಉಮಾಶ್ರೀ, ಸೀತಾರಾಂ ಮತ್ತು ಸುಧಾಮ್ ದಾಸ್ ಅವರಿಗೆ ಪ್ರಮಾಣವಚನ ಬೋಧನೆ ಮಾಡಲಾಯಿತು. ಈ ಸಮಾರಂಭದಲ್ಲಿ ಭಾಗವಹಿಸಿದ ಮುಖ್ಯಮಂತ್ರಿಗಳು ಮೂವರಿಗೂ ಶುಭ ಹಾರೈಸಿದರು.

ಇದನ್ನೂ ಓದಿ: ಕಾವೇರಿ ನೀರು ಹರಿಸುವುದನ್ನು ಸರ್ಕಾರ ನಿಲ್ಲಿಸಿ, ಸುಪ್ರೀಂ ಗೆ ಮೇಲ್ಮನವಿ ಸಲ್ಲಿಸಲಿ : ಬೊಮ್ಮಾಯಿ

ಈ ವೇಳೆ ಪ್ರವಾಸೋದ್ಯಮ ಹಾಗು ಕಾನೂನು ಸಂಸದೀಯ ವ್ಯವಹಾರಗಳ ಸಚಿವ ಎಚ್​.ಕೆ ಪಾಟೀಲ್​, ಸಣ್ಣ ನೀರಾವರಿ ಸಚಿವ ಎನ್​,ಎಸ್​ ಬೋಸರಾಜ್​, ಗೋವಿಂದರಾಜ್​,ಬಸವರಾಜ ಹೊರಟ್ಟಿ, ಸೇರಿದಂತೆ ಹಲವರು ಉಪಸ್ಥಿತರಿದ್ದರು.

RELATED ARTICLES

Related Articles

TRENDING ARTICLES