Monday, December 23, 2024

HDK ಆರೋಗ್ಯ ಚೇತರಿಕೆಗೆ 101 ಇಡುಗಾಯಿ ಹೊಡೆದ JDS ಮುಖಂಡರು

ರಾಮನಗರ : ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಶೀಘ್ರ ಗುಣಮುಖವಾಗಲಿ ಎಂದು ರಾಮನಗರದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.

ಹೆಚ್​ಡಿಕೆ ಸ್ವಕ್ಷೇತ್ರ ಚನ್ನಪಟ್ಟಣ ತಾಲ್ಲೂಕಿನ ಕೆಂಗಲ್ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಜೆಡಿಎಸ್ ಮುಖಂಡರು ವಿಶೇಷ ಪೂಜೆ ನೆರವೇರಿಸಿದ್ದಾರೆ.

ಕೆಂಗಲ್ ದೇವಾಲಯದ ಮುಂದೆ 101 ಇಡುಗಾಯಿ ಹೊಡೆದಿದ್ದಾರೆ. ಈ ಮೂಲಕ ಕುಮಾರಸ್ವಾಮಿ ಅವರು ಶೀಘ್ರ ಗುಣಮುಖರಾಗಲಿ, ಆರೋಗ್ಯದಲ್ಲಿ ಚೇತರಿಕೆ ಕಂಡು ರಾಜಕೀಯಕ್ಕೆ ಮರಳಲಿ ಎಂದು ಜೆಡಿಎಸ್ ಮುಖಂಡರು ಎಂದು ಪ್ರಾರ್ಥನೆ ಸಲ್ಲಿಸಿದ್ದಾರೆ.

ತಂದೆ ಆರೋಗ್ಯ ವಿಚಾರಿಸಿದ ನಿಖಿಲ್

ನಿಖಿಲ್ ಕುಮಾರಸ್ವಾಮಿ ಅವರು ಅಪೋಲೋ ಆಸ್ಪತ್ರೆಗೆ ಭೇಟಿ ನೀಡಿ ತಂದೆ ಹೆಚ್​.ಡಿ ಕುಮಾರಸ್ವಾಮಿ ಅವರ ಆರೋಗ್ಯ ವಿಚಾರಿಸಿದ್ದಾರೆ. ತಾಯಿ ಅನಿತಾ ಕುಮಾರಸ್ವಾಮಿ ಹಾಗೂ ಪತ್ನಿ ಕೂಡ ಆಗಮಿಸಿದ್ದಾರೆ. ಮಂಡ್ಯ ಜಿಲ್ಲಾ ಜೆಡಿಎಸ್ ಅಧ್ಯಕ್ಷ ರಮೇಶ್ ಬಾಬು, ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ ಅವರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

RELATED ARTICLES

Related Articles

TRENDING ARTICLES