Monday, December 23, 2024

ಕಾರಿನಲ್ಲಿ 1.5 ಕೆಜಿ ಗಾಂಜಾ ಸಾಗಿಸುತ್ತಿದ್ದ ಆರೋಪಿ ಬಂಧನ

ಮಂಡ್ಯ : ಕಾರಿನಲ್ಲಿ ಅಕ್ರಮವಾಗಿ 1.5 ಕಿಲೋ ಗಾಂಜಾ ಸಾಗಿಸುತ್ತಿದ್ದ ಆರೋಪಿಯನ್ನು ಮಂಡ್ಯ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು ಮೂಲದ ಶಶಾಂಕ್ ಬಂಧಿತ ಆರೋಪಿ. ಈತ ಚಾಮರಾಜನಗರದಿಂದ ಬೆಂಗಳೂರಿಗೆ ಗಾಂಜಾ ಸೊಪ್ಪು ಸಾಗಣೆ ಮಾಡುತ್ತಿದ್ದನು ಎಂದು ಪೊಲೀಸರು ಹೇಳಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಹಲಗೂರು ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಹಲಗೂರು ಬಳಿ ಕಾರನ್ನು ತಪಾಸಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಕಾರಿನಲ್ಲಿದ್ದ 1.5 ಕಿಲೋ ಗಾಂಜಾ ಸೊಪ್ಪನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

Related Articles

TRENDING ARTICLES