Monday, December 23, 2024

ಸಿಲಿಂಡರ್ ದರ 600 ರೂ. ಇಳಿಸಬೇಕು : ಸಿದ್ದರಾಮಯ್ಯ

ಬೆಂಗಳೂರು : ಪ್ರಧಾನಿ ಮೋದಿ ಅವ್ರೇ, ಬೆಲೆ ಏರಿಕೆಯ ಹೊರೆ ಇಳಿಸುವ ಪ್ರಾಮಾಣಿಕ ಉದ್ದೇಶ ಹೊಂದಿದ್ದರೆ ಪ್ರತಿ ಸಿಲಿಂಡರ್‌ನ ಬೆಲೆಯನ್ನು ಕನಿಷ್ಠ 500 ರೂ. ನಿಂದ 600 ರೂ. ಇಳಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಡೀಸೆಲ್, ಪೆಟ್ರೋಲ್ ಬೆಲೆಯನ್ನು 60 ರೂ.ನಿಂದ 70 ರೂ. ಇಳಿಸಬೇಕು. ಇದನ್ನು ಮಾಡದೆ ಇದ್ದರೆ ಇದೊಂದು ಕಣ್ಣೊರೆಸುವ ತಂತ್ರ, ಚುನಾವಣಾ ಗಿಮಿಕ್, ಬಾಯಿ ಬಡಾಯಿ ಅಂತ ವ್ಯಾಖ್ಯಾನಿಸಬೇಕಾಗುತ್ತೆ ಎಂದು ಕುಟುಕಿದ್ದಾರೆ.

ಕೊನೆಗೂ ನಮ್ಮ ಗ್ಯಾರಂಟಿ ಯೋಜನೆಗಳಿಂದ ಪ್ರೇರಣೆ ಪಡೆದು ಎಲ್.ಪಿ.ಜಿ ಸಿಲಿಂಡರ್ ಬೆಲೆಯನ್ನು 200 ರೂ. ಕಡಿಮೆ ಮಾಡಿರುವುದಕ್ಕಾಗಿ ಪ್ರಧಾನಿ ಮೋದಿ ಅವರಿಗೆ ಧನ್ಯವಾದಗಳು. ನಮ್ಮ ಜನಪರವಾದ ಯೋಜನೆಗಳಿಂದ ಪ್ರೇರಿತರಾಗಿ ಜಾರಿಗೆ ತರುವ ಎಲ್ಲ ಯೋಜನೆಗಳನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ ಎಂದು ಚಾಟಿ ಬೀಸಿದ್ದಾರೆ.

200 ಮಾತ್ರ ಇಳಿಸಿದ್ದು ಯಾಕೆ?

ಅಂತರಾಷ್ಟ್ರೀಯ ಮಾರುಕಟ್ಟೆಯ ‘ಸೌದಿ ಸಿಪಿ’ ದರ ಪ್ರತಿ ಟನ್‌ಗೆ 732 ಡಾಲರ್‌ ಇದ್ದದ್ದು, ಈಗ 385 ಡಾಲರ್‌ಗೆ ಕುಸಿದಿದೆ. ಅಂದರೆ ಶೇ.48ರಷ್ಟು ಇಳಿಕೆಯಾಗಿದೆ. ಸಿಲಿಂಡರ್ ದರವೂ ಹೆಚ್ಚು ಕಡಿಮೆ ಅರ್ಧದಷ್ಟು ಇಳಿಕೆ ಮಾಡಬೇಕಿತ್ತಲ್ಲವೇ? ಆದ್ರೆ, ನೀವು ಇಳಿಕೆ ಮಾಡಿರೋದು ಪ್ರತಿ ಸಿಲಿಂಡರ್‌ಗೆ 200 ರೂ. ಮಾತ್ರ. ಇದು ಯಾಕೆ ಮೋದಿ ಅವ್ರೇ? ಎಂದು ಪ್ರಶ್ನಿಸಿದ್ದಾರೆ.

ಕೇಂದ್ರದ ಪಾಲು ಏನೂ ಇಲ್ಲ

ಮೋದಿ ಅವ್ರೇ, ನಿಮ್ಮ ಬಹಳಷ್ಟು ಮೀನಮೇಷ ಎಣಿಸಿ ಎಲ್‌ಪಿಜಿ ಸಿಲಿಂಡರ್‌ ದರ 200 ರೂ. ಕಡಿಮೆ ಮಾಡಿ ಘೋಷಣೆ ಮಾಡಿದ್ದೀರಿ. ಮೇಲುನೋಟಕ್ಕೆ ಇದರಲ್ಲಿ ಕೇಂದ್ರದ ಪಾಲು ಏನೂ ಇಲ್ಲ. ‘ಕಾರ್ಪೊರೆಟ್‌ ಹೊಣೆಗಾರಿಕೆ’ಯ ರೀತಿ ತೈಲ ಕಂಪೆನಿಗಳೇ ಈ ವೆಚ್ಚವನ್ನು ಭರಿಸಲಿವೆ ಅಂತ ನಿಮ್ಮ ಸಂಪುಟದ ಮಿನಿಸ್ಟ್ರು ಒಪ್ಪಿಕೊಂಡಿದ್ದಾರೆ ಎಂದು ಛೇಡಿಸಿದ್ದಾರೆ.

RELATED ARTICLES

Related Articles

TRENDING ARTICLES